ಕಲ್ಪ ಮೀಡಿಯಾ ಹೌಸ್ | ಮೈಸೂರು |
ನಾಡಹಬ್ಬ ದಸರಾಗೆ Mysore Dasara ಇಂದು ಮುಂಜಾನೆ ಮೈಸೂರಿನಲ್ಲಿ ಅದ್ಧೂರಿ ಚಾಲನೆ ದೊರೆತಿದ್ದು, ನೂತನ ರಾಷ್ಟ್ರಪತಿ ದ್ರೌಪದಿ ಅವರ ಉಪಸ್ಥಿತಿಯ ಮೂಲಕ ಐತಿಹಾಸಿಕ ಕ್ಷಣ ಸಾಂಸ್ಕೃತಿಕ ನಗರಿ ಸಾಕ್ಷಿಯಾಯಿತು.
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಕ್ಕೆ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಂದ ಚಾಲನೆ. #MysuruDasara #Dasara2022 https://t.co/eN98pgJZUy
— CM of Karnataka (@CMofKarnataka) September 26, 2022
ಇಂದು ಬೆಳಗ್ಗೆ 10:10ಕ್ಕೆ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, President Droupadi Murmu ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, Governer Thavarchand Gehlot ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, CM Basavaraja Bommai ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ Central Minister Prhlad Joshi ಅವರುಗಳು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗುವ ಮೂಲಕ ದಸರಾಗೆ ಅಧಿಕೃತ ಚಾಲನೆ ನೀಡಿದರು.

ಉದ್ಘಾಟನೆಗೂ ಮುನ್ನ ರಾಷ್ಟ್ರಗೀತೆಯನ್ನು ನುಡಿಸುವ ಮೂಲಕ ದೇಶಕ್ಕೆ ಗೌರವ ಸಲ್ಲಿಸಲಾಯಿತು. ಕ್ರೀಡಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು.












Discussion about this post