ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಐಎಸ್’ಐಎಸ್ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಬಂಧನಗೊಂಡಿರುವ ಇಬ್ಬರು ಶಂಕಿತ ಉಗ್ರರ ಪೊಲೀಸ್ ಕಸ್ಟಡಿ ಅವಧಿಯನ್ನು ಮತ್ತೆ ಐದು ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
ಉಗ್ರರ ಜೊತೆ ಸಂಪರ್ಕದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಮಾಜ್ ಮುನೀರ್ ಹಾಗೂ ಯಾಸಿನ್ ಅವರುಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರುಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮತ್ತೆ ಐದು ದಿನಗಳ ಕಾಲೆ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.
3ನೆಯ ಜೆಎಂಎಫ್’ಸಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸುವ ಮುನ್ನ ಮೆಗ್ಗಾನ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post