ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಬೆಂಕಿಪುರ ನಗರವನ್ನು ಭದ್ರಾವತಿವನ್ನಾಗಿಸಿದ ಹಿರಿಮೆ ಮೈಸೂರು ಸಂಸ್ಥಾನಕ್ಕೆ ಲಭಿಸುತ್ತದೆ ಎಂದು ಹಿರಿಯ ಕಾರ್ಮಿಕ ಹೋರಾಟ ಡಿ.ಸಿ ಮಾಯಣ್ಣ ಹೇಳಿದರು.
ಅವರು ಸೋಮವಾರ ನಗರಸಭೆವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ 10 ದಿನಗಳ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಮೈಸೂರು ಸಂಸ್ಥಾನದ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿವೃದ್ಧಿ ಚಿಂತನೆಗಳು ಹಾಗು ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ಶ್ರಮದ ಫಲವಾಗಿ ಮೈಸೂರು ಸಂಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳು ಬೆಳವಣಿಗೆ ಹೊಂದಿದವು. ಏಷ್ಯಾದಲ್ಲಿಯೇ ಮೊದಲ ಬಾರಿಗೆ ಈ ಭಾಗದಲ್ಲಿ ಜಲವಿದ್ಯುತ್ ಯೋಜನೆಯನ್ನು ಆರಂಭಿಸಲಾಯಿತು. ಕೆಮ್ಮಣ್ಣು ಗುಂಡಿಯಲ್ಲಿ ಅದಿರು ನಿಕ್ಷೇಪವಿರುವುದನ್ನು ಪತ್ತೆಹಚ್ಚುವ ಮೂಲಕ ಕಬ್ಬಿಣದ ಅದಿರು ಕಾರ್ಖಾನೆಯನ್ನು ಪ್ರಾರಂಭಿಸಲಾಯಿತು. ನಂತರ ಕಾಗದ ಕಾರ್ಖಾನೆ ಸಹ ಆರಂಭಿಸಲಾಯಿತು. ಆರಂಭದಲ್ಲಿ ಎರಡು ಕಾರ್ಖಾನೆಗಳನ್ನು ನಂಬಿ ಸುಮಾರು ೨೦ ಸಾವಿರಕ್ಕೂ ಹೆಚ್ಚಿನ ಕಾರ್ಮಿಕ ಕುಟುಂಬಗಳು ಬದುಕು ರೂಪಿಸಿಕೊಂಡಿದ್ದವು. ಇವೆಲ್ಲದರ ಪರಿಣಾಮ ಬೆಂಕಿಪುರ ಭದ್ರಾವತಿಯಾಗಿ ವಿಶ್ವದ ಭೂಪಟದಲ್ಲಿ ಗುರುತಿಸಿ ಸಾಧ್ಯವಾಯಿತು ಎಂದರು.

ಶಾಸಕ ಬಿ.ಕೆ. ಸಂಗಮೇಶ್ವರ್ MLA Sangameshwar ಮಾತನಾಡಿ, ಪ್ರಸ್ತುತ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಈ ಸರ್ಕಾರದಲ್ಲಿ ಸಚಿವನಾಗುವುದು ಖಚಿತ. ಈ ಎರಡು ಕಾರ್ಖಾನೆಗಳನ್ನು ಅಭಿವೃದ್ಧಿ ಪಡಿಸುವುದು ನನ್ನ ಮುಂದಿನ ಗುರಿಯಾಗಿದೆ ಎಂದರು.

Also read: 10 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳೂ ಸಹ ಅಪ್ರಾಪ್ತರೇ!
ಇದಕ್ಕೂ ಮೊದಲು ಮಾಧವಚಾರ್ ವೃತ್ತದಿಂದ ಡಿ.ಸಿ ಮಾಯಣ್ಣ ಅವರನ್ನು ಮಂಗಳ ವಾದ್ಯಗಳೊಂದಿಗೆ ಮೆರವಣಿಯಲ್ಲಿ ಕರೆ ತರಲಾಯಿತು. ನಂತರ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.











Discussion about this post