ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ಗಾಂಜಾ ಬೆಳಗಾರ ದುಷ್ಕರ್ಮಿಗಳಿಂದ ಭೀಕರವಾಗಿ ಹಲ್ಲೆಗೆ ಒಳಗಾಗಿರುವ ಕಮಲಾಪುರ ಸಿಪಿಐ ಶ್ರೀಮಂತ ಇಲ್ಲಾಳ್ CPI Shrimantha Illal ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಏರ್ ಲಿಫ್ ಮಾಡಲಾಗಿದೆ.
ಮಹಾರಾಷ್ಟçದ ಗಡಿ ಭಾಗದಲ್ಲಿ ಗಾಂಜಾ ಬೆಳೆಯುತ್ತಿದ್ದವರ ಮೇಲೆ ಸಮರ ಸಾರಿದ್ದ ಇಲ್ಲಾಳ್ ಅವರ ಮೇಲೆ ಸುಮಾರು 50 ಜನ ದುಷ್ಕರ್ಮಿಗಳು ಭೀಕರವಾಗಿ ಹಲ್ಲೆ ನಡೆಸಿದ್ದರು. ಇದರಿಂದ ಪ್ರಜ್ಞಾ ಹೀನರಾಗಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರ ಆರೋಗ್ಯ ಸದ್ಯ ಸ್ಥಿರತೆಯತ್ತ ಸಾಗಿದ ಹಿನ್ನೆಲೆಯಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡುವ ಸಲುವಾಗಿ ಬೆಂಗಳೂರಿಗೆ ಏರ್ ಆ್ಯಂಬುಲೆನ್ಸ್ ಮೂಲಕ ಕರೆದೊಯ್ಯಲಾಗಿದೆ.

Also read: ಮಾಜಿ ಸಿಎಂ ಎಸ್.ಎಂ. ಕೃಷ್ಣ ಆರೋಗ್ಯ ಸ್ಥಿರ: ಸಚಿವ ಡಾ. ಸುಧಾಕರ್ ಮಾಹಿತಿ











Discussion about this post