ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಿಎಫ್‌ಐ ಹಾಗೂ ಅದರ ಅಂಗಸಂಸ್ಥೆಗಳನ್ನು ದೇಶದಲ್ಲಿ 5 ವರ್ಷಗಳ ಅವಧಿಗೆ ನಿಷೇಧಿಸಿ, ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಈ ನೆಲದ ಕಾನೂನಿಗೆ ವಿರುದ್ಧವಾಗಿರುವ, ದೇಶ ವಿರೋಧಿ ಚಟುವಟಿಕೆ ನಡೆಸುವ ಯಾರನ್ನೂ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ, PM Narendra Modi ಗೃಹ ಸಚಿವ ಅಮಿತ್ ಶಾ Home Minister Amith Shah ಅವರಿಗೆ ಸಂಸದ ಬಿ.ವೈ. ರಾಘವೇಂದ್ರ MP Raghavendra ಧನ್ಯವಾದ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರದಲ್ಲಿ ಭಯೋತ್ಪಾದನಾ ಕೃತ್ಯಗಳನ್ನು ಎಸಿಗುತ್ತಿದ್ದ ಈ ಸಂಘಟನೆಗಳನ್ನು ದೇಶದ ಭದ್ರತೆ, ಅಂತರಿಕ ಸುರಕ್ಷತೆ ಹಿನ್ನೆಲೆಯಲ್ಲಿ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ ಎಂದಿದ್ದಾರೆ.
2001 ಸಪ್ಟೆಂಬರ್ 27ರಂದು SIMI ಸಂಘಟನೆಯನ್ನು ಬ್ಯಾನ್ ಮಾಡಲಾಗಿತ್ತು, 2022 ಸೆಪ್ಟೆಂಬರ್ 27ರಂದು PFI ಸೇರಿದಂತೆ 5 ಸಂಘಟನೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ & ಪಿಎಫ್‌ಐ ಅಂಗ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನೃಡರೇಶನ್ ಆಫ್ ನ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳ ಇವುಗಳನ್ನು ನಮ್ಮ ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.
ಬಹುದಿನಗಳ ಬೇಡಿಕೆಯಾಗಿದ್ದ ಈ ಸಂಘಟನಗಳನ್ನು ಬ್ಯಾನ್ ಮಾಡಿರುವುದು ದೇಶದ ಸುರಕ್ಷತೆ ದೃಷ್ಟಿಯಿಂದ ಅತ್ಯುತ್ತಮ ಕಾರ್ಯವಾಗಿದೆ. ನಿಖರ ಮಾಹಿತಿ ಮೇರೆಗೆ NIA ಸೇರಿದಂತೆ ವಿವಿಧ ರಾಜ್ಯಗಳ ಪೋಲಿಸ್ ಇಲಾಖೆ, ಇಲಾಖೆ ಗುಪ್ತಚರ ಮತ್ತು ಇತರ ತನಿಖಾ ತಂಡಗಳು ದೇಶದ 15 ರಾಜ್ಯಗಳಲ್ಲಿ ದಾಳಿ ನಡೆಸಿ ಅನೇಕ ಸಾಕ್ಷಿಗಳನ್ನು ಹಾಗೂ ದೊಡ್ಡ ಮಟ್ಟದ ಹಣವನ್ನು ಮತ್ತು ಸಂಘಟನೆಯ ಪ್ರಮುಖರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post