ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶಿವಮೊಗ್ಗದಲ್ಲಿ ನಡೆದ ಮಕ್ಕಳ ದಸರಾ ಕ್ರೀಡಾಕೂಟದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ಸೆಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳಾದ ಸಿಂಚನ ಎಂ ಪಾಟೀಲ್ ಹಾಗೂ ಪ್ರಕೃತಿ ಆರ್ ಗೌಡ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಸಿಂಚನ ಎಂ. ಪಾಟೀಲ್ ಹಾಗೂ ಪ್ರಕೃತಿ ಆರ್. ಗೌಡ ತಾಲೂಕು, ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದು, ರಾಜ್ಯಮಟ್ಟಕ್ಕೂ ಸಹ ಆಯ್ಕೆಯಾಗಿ ಕೀರ್ತಿ ತಂದಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳನ್ನು ಬಾರಂದೂರು ಮಂಜುನಾಥ್ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


























