ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸುಮಾರು 9 ತಿಂಗಳುಗಳ ನಂತರ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ನೂತನ ಸಿಡಿಎಸ್ ಆಗಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರನ್ನು ನೇಮಕ ಮಾಡಿದೆ.
ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಡಿಜಿಎಂಒ (ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು) ಆಗಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದು, ಪೂರ್ವ ಕಮಾಂಡ್ ನ ಜಿಒಸಿ0-ಇನ್-ಸಿ (ಜನರಲ್ ಆಫೀಸರ್ ಕಮಾಂಡರ್-ಇನ್-ಚೀಫ್) ಹುದ್ದೆಯಲ್ಲಿ ನಿವೃತ್ತರಾಗಿದ್ದರು. ಸೇನಾ ಭಾಷೆಯಲ್ಲಿ ಹೇಳಬೇಕೆಂದರೆ ಅವರು ಈಸ್ಟರ್ನ್ ಆರ್ಮಿ ಕಮಾಂಡರ್ ಆಗಿದ್ದವರು.
ಸೇನೆಯ ಎರಡು ಅತ್ಯಂತ ಸೂಕ್ಷ್ಮ ಕಮಾಂಡ್’ಗಳ ಪೈಕಿ ಈಸ್ಟರ್ನ್ ಆರ್ಮಿಯೂ ಒಂದಾಗಿದೆ. ಅನಿಲ್ ಚೌಹಾಣ್ ಅವರು 2021 ರ ಮೇ 31 ರಂದು ನಿವೃತ್ತರಾಗಿದ್ದರು.
ಸುಮಾರು 40 ವರ್ಷಗಳ ವೃತ್ತಿಜೀವನದಲ್ಲಿ, ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾನ್ ಅವರು ಹಲವಾರು ಕಮಾಂಡ್, ಸಿಬ್ಬಂದಿ ಮತ್ತು ವಾದ್ಯಗಳ ನೇಮಕಾತಿಗಳನ್ನು ಹೊಂದಿದ್ದರು. ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯ ಭಾರತದಲ್ಲಿ ದಂಗೆ-ನಿರೋಧಕ ಕಾರ್ಯಾಚರಣೆಗಳಲ್ಲಿ ವ್ಯಾಪಕ ಅನುಭವವನ್ನು ಹೊಂದಿದ್ದಾರೆ ಎಂದು ರಕ್ಷಣಾ ಸಚಿವಾಲಯ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post