ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣದಲ್ಲಿ ನಮ್ಮ ಪಕ್ಷವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Former CM Yadiyurappa ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ ಸುಭದ್ರವಾಗುತ್ತಾ, ಅಭಿವೃದ್ಧಿಯಾಗುತ್ತಿದೆ. ಹೀಗಾಗಿ, ಬಿಜೆಪಿಯ ತತ್ವ, ಸಿದ್ಧಾಂತ ಹಾಗೂ ಮೋದಿಯವರ ನಾಯಕತ್ವ ಮೆಚ್ಚಿ ಬೇರೆ ಪಕ್ಷದ ಅನೇಕ ಮುಖಂಡರು ನಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ. ಇನ್ನೂ ಹಲವು ಮುಖಂಡರು ಬಿಜೆಪಿ ಸೇರುವ ಚಿಂತನೆಯಲ್ಲಿದ್ದಾರೆ. ಇವರುಗಳೆಲ್ಲಾ ಸೇರಿದ ನಂತರ ನಮಗೆ ಮತ್ತಷ್ಟು ಬಲ ಬರುತ್ತದೆ ಎಂದರು.























Discussion about this post