ಕಲ್ಪ ಮೀಡಿಯಾ ಹೌಸ್ | ಯಲ್ಲಾಪುರ |
ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿ ಪೆಟ್ರೋಲ್ ಸೋರಿಕೆಯಾಗಿರುವ ಘಟನೆ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ನಡೆದಿದೆ.
ಮಂಗಳೂರಿನಿಂದ ಬೀದರ್ ಕಡೆಗೆ ಪೆಟ್ರೋಲ್ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಪೆಟ್ರೋಲ್ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಧಾವಿಸಿ ಟ್ಯಾಂಕರನ್ನು ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















