ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಾಡಹಬ್ಬ ದಸರಾ ಅಂಗವಾಗಿ ನಗರಸಭೆ ವತಿಯಿಂದ ಹಳೇನಗರದ ಕನಕಮಂಟಪದಲ್ಲಿ ಆಯೋಜಿಸಲಾಗಿದ್ದ ದಸರಾ ಜಾನಪದ ಉತ್ಸವ ಪ್ರೇಕ್ಷಕರ ಮನಸೂರೆಗೊಂಡಿತು.
ಜಾನಪದ ಕಲಾವಿದ ತಮಟೆ ಜಗದೀಶ್ ನೇತೃತ್ವದಲ್ಲಿ ವಿವಿಧ ಜನಪದ ಕಲಾ ತಂಡಗಳು ತಮ್ಮ ಪ್ರತಿಭೆಗಳನ್ನು ವೇದಿಕೆಯಲ್ಲಿ ಅನಾವರಣಗೊಳಿಸಿದವು.

ಜಾನಪದ ಕಲಾಸಕ್ತರು, ವಿವಿಧ ಸಂಘಟನೆಗಳ ಪ್ರಮುಖರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗು ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಮತ್ತು ಹಳೇನಗರ, ಹೊಸಮನೆ ಸೇರಿದಂತೆ ಸುತ್ತಮುತ್ತಲಿನ ಭಾಗದ ನಿವಾಸಿಗಳು ದಸರಾ ಜಾನಪದ ಉತ್ಸವ ಕಣ್ತುಂಬಿಕೊಂಡರು.























Discussion about this post