ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಜಿಲ್ಲೆಯ ಅಣಬೇರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಲ್ಕುಂದ ಗ್ರಾಮದಲ್ಲಿ ಭದ್ರಾ ಜಲಾಶಯದ ಬಲದಂಡೆಯ ನಾಲೆಯ ತೊಟ್ಟಿಲು ಸೇತುವೆ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಒಡೆದಿದ್ದುದರಿಂದ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲಿಸಲಾಯಿತು.
ಈ ಸಂದರ್ಭದಲ್ಲಿ ರೈತರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದು, ನೀರಾವರಿ ಇಲಾಖೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ದೂರವಾಣಿಯ ಮೂಲಕ ಮಾತನಾಡಿ, ಸಮಸ್ಯೆಯ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ರೈತ ಮುಖಂಡರಾದ ನಾಗೇಶ್ ರಾವ್, ಜಿಲ್ಲಾ ಪಂಚಾಯಿತಿ ಸದಸ್ಯರು ವಾಗೀಶ್, ನೀರು ಬಳಕೆದಾರ ಸಂಘದ ಸದಸ್ಯರು ಮತ್ತು ಸ್ಥಳೀಯ ರೈತರು ಉಪಸ್ಥಿತರಿದ್ದರು.
Also read: ಮಹಿಳಾ ಮ್ಯಾರಥಾನ್: ಸುಬ್ಬಯ್ಯ ಕಾಲೇಜಿನ ಡಾ.ವಿನಯಾ ಶ್ರೀನಿವಾಸ್ ಉತ್ತಮ ಸಾಧನೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















