ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೂತನ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ನಿರ್ಗಮಿತ ಎಸ್’ಪಿ ಲಕ್ಷ್ಮೀಪ್ರಸಾದ್ ಅವರು ನೂತನ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿ, ಹೂಗುಚ್ಚ ನೀಡಿ ಅಭಿನಂದಿಸಿದರು.


ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಎಸ್’ಪಿ ಮಿಥುನ್ ಕುಮಾರ್ ಅವರು, ಶಿವಮೊಗ್ಗ ಐತಿಹಾಸಿಕ ಪ್ರಸಿದ್ಧಿಯನ್ನು ಹೊಂದಿರುವ ಜಿಲ್ಲೆಯಾಗಿದೆ. ವೇಗವಾಗಿ ಅಭಿವೃದ್ಧಿಯಾಗುತ್ತಿರುವ ನಗರಗಳಲ್ಲಿ ಒಂದಾಗಿರುವ ಶಿವಮೊಗ್ಗದಲ್ಲಿ ಕೆಲಸ ಮಾಡುವ ಅವಕಾಶ ದೊರೆತಿರುವುದು ಸಂತೋಷದ ಸಂಗತಿ. ಇಲ್ಲಿನ ಜನ ಪ್ರಜ್ಞಾವಂತರಿದ್ದು, ಜಿಲ್ಲೆಯ ಜನರ ಸಹಕಾರ ನಮಗೆ ಅತ್ಯಂತ ಮುಖ್ಯವಾದುದು ಎಂದರು.
ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರ ಸಹಕಾರ ಅಗತ್ಯವಾಗಿದ್ದು, ನಾಗರಿಕರ ಶಾಂತಿ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈಗಾಗಲೇ ತನಿಖೆ ನಡೆಯುತ್ತಿರುವ ಪ್ರಮುಖ ಹಾಗೂ ಗಂಭೀರ ಪ್ರಕರಣಗಳ ಕುರಿತಾಗಿ ನಿರ್ಗಮಿತ ಎಸ್’ಪಿ ಅವರು ಮಾಹಿತಿ ನೀಡಿದ್ದಾರೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ಪಡೆದು ಆನಂತರ ಪ್ರಗತಿಯ ಬಗ್ಗೆ ತಿಳಿಸಲಾಗುವುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















