ಕಲ್ಪ ಮೀಡಿಯಾ ಹೌಸ್ | ಸೊರಬ |
ಪುರಾಣ, ಇತಿಹಾಸದ ಶಕ್ತಿ ಕೇಂದ್ರವಾದ ಚಂದ್ರಗುತ್ತಿ ದಸರಾ ಆಚರಣೆಯ ಜೊತೆಗೆ ಈ ನೆಲೆಯ ಜೀವವೈವಿಧ್ಯ ರಕ್ಷಣೆಗೆ ಸಂಕಲ್ಪ ತೊಡಬೇಕು ಎಂದು ರಾಜ್ಯ ಜೀವವೈವಿಧ್ಯ ಮಂಡಳಿಯ ಎಕ್ಸ್’ಪರ್ಟ್ ಕಮಿಟಿ ಸದಸ್ಯ ಶ್ರೀಪಾದ ಬಿಚ್ಚುಗತ್ತಿ ಹೇಳಿದರು.
ಚಂದ್ರಗುತ್ತಿಯಲ್ಲಿ ಧಾರ್ಮಿಕ ದತ್ತಿ ಇಲಾಖೆ, ತಾಲೂಕು ಆಡಳಿತ, ಕನ್ನಡ ಸಾಂಸ್ಕೃತಿ ಇಲಾಖೆ, ಗ್ರಾಮ ಪಂಚಾಯಿತಿ ಮತ್ತು ದೇವಸ್ಥಾನ ವ್ಯವಸ್ಥಾಪನ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ರೇಣುಕಾ ಪರಮೇಶ್ವರಿ ಅಮ್ಮನವರ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವದ 2ನೇ ದಿನದ ಸಮಾರೋಪ ಸಮಾರಂಭ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಉತ್ಸವಕ್ಕೆ ಸಹಕರಿಸಿದ ಸ್ವಯಂ ಸೇವಕರನ್ನು ಗುರುತಿಸಿ ಗೌರವಿಸುತ್ತಿರುವುದು ಶ್ಲಾಘನೀಯ, ನಿರಂತರ ಕ್ರಿಯಾತ್ಮಕ ಚಟುವಟಿಕೆಗಳಿಗೆ ಎಲ್ಲರ ಸಹಕಾರ ಅತ್ಯಗತ್ಯ, ನಿರಂತರವಾಗಿ ದಸರಾ ಉತ್ಸವ ಸಂಪನ್ನಗೊಳ್ಳಲಿ ಎಂದರು.

Also read: ಅ.8ರಂದು 20 ವರ್ಷಗಳಲ್ಲಿ ಪ್ರಧಾನಮಂತ್ರಿ ಮೋದಿಯವರ ಸಾಕಾರವಾದ ಕನಸುಗಳು ಕಾರ್ಯಕ್ರಮ
ಸತತ ಒಂಬತ್ತು ದಿನಗಳ ಕಾಲ ದೇವಸ್ಥಾನಕ್ಕೆ ಬರುವಂತಹ ಭಕ್ತರಿಗೆ ಅನ್ನದಾಸೋಹ ಸೇವೆ ನೆರವೇರಿಸಿದರು. ಸಮಾರೋಪ ಸಮಾರಂಭ ಬಳಿಕ ಖ್ಯಾತ ಯಕ್ಷಗಾನ ಕಲಾವಿದರಿಂದ ಚಂದ್ರಹಾಸ ಯಕ್ಷಗಾನ ಪ್ರದರ್ಶನ ನಡೆಯಿತು.












Discussion about this post