ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ನಗರದ ಖಾಸಗಿ ಹೊಟೇಲ್ವೊಂದರಲ್ಲಿ ದುಷ್ಕರ್ಮಿಗಳ ಚಾಕು ಇರಿತದಿಂದ ಸಾವನ್ನಪ್ಪಿದ ಸರಳವಾಸ್ತು ಚಂದ್ರಶೇಖರ ಗುರೂಜಿ Saralavasthu Chandrashekar Guruji ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಕಮಿಷನರೇಟ್ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ಜೆಎಂಎಫ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ಚಾರ್ಜ್ಶೀಟ್ ಬರೋಬ್ಬರಿ 800 ಪುಟಗಳನ್ನೊಳಗೊಂಡಿದ್ದು, ಹತ್ಯೆಗೆ ಕಾರಣ ಹಾಗೂ ಪ್ರಕರಣ ಮಹತ್ವದ ಅಂಶಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.
ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿದ್ದ ಸರ್ವೆ ನಂಬರ್ 166/1, 5 ಎಕರೆ 11 ಗುಂಟೆ ಜಮೀನು ವಿಚಾರವಾಗಿ ಚಂದ್ರಶೇಖರ ಗುರೂಜಿ ಅವರ ಕೊಲೆ ನಡೆದದೆ ಎಂದು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ಈ ಜಮೀನು ಬಸವರೆಡ್ಡಿ ಎಂಬುವರ ಹೆಸರಿನಲ್ಲಿದೆ ಹಾಗೂ ಈತ ಸರಳವಾಸ್ತು ಕಂಪನಿಯ ಹಳೇ ಉದ್ಯೋಗಿಯಾಗಿದ್ದನು. ಗುರೂಜಿ ಕಂಪನಿ ಬಿಟ್ಟ ಬಳಿಕ ಮಹಾಂತೇಶ್, ಮಂಜುನಾಥ ಮತ್ತು ಬಸವರೆಡ್ಡಿ ಗುರೂಜಿ ವಿರುದ್ಧ ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದ್ದರು ಎಂದು ವರದಿಯಾಗಿದೆ.
Also read: ಹೊತ್ತಿ ಉರಿದ ಬಸ್: 10 ಮಂದಿ ಸಜೀವ ದಹನ, 24 ಮಂದಿಗೆ ಗಾಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post