ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್(82) ಇಂದು ವಿಧಿವಶರಾಗಿದ್ದಾರೆ.
ಉಸಿರಾಟದ ಸಮಸ್ಯೆ ಸೇರಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ನೀಡಲಾಗುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ. ಈ ಮೂಲಕ ದೇಶದ ರಾಜಕೀಯದಲ್ಲಿ ಬಹುದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ. ಅವರು ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.

ಗಣ್ಯಾತಿಗಣ್ಯರ ಸಂತಾಪ
ಯಾದವ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿಯವರು, ನಾವು ನಮ್ಮ ಆಯಾ ರಾಜ್ಯಗಳ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದಾಗ ನಾನು ಮುಲಾಯಂ ಸಿಂಗ್ ಯಾದವ್ ಜೀ ಅವರೊಂದಿಗೆ ಅನೇಕ ಸಂವಾದಗಳನ್ನು ನಡೆಸಿದೆ. ನಿಕಟ ಒಡನಾಟವು ಮುಂದುವರೆಯಿತು ಮತ್ತು ನಾನು ಯಾವಾಗಲೂ ಅವರ ಅಭಿಪ್ರಾಯಗಳನ್ನು ಕೇಳಲು ಎದುರು ನೋಡುತ್ತಿದ್ದೆ. ಅವರ ನಿಧನ ನನಗೆ ನೋವು ತಂದಿದೆ. ಅವರ ಕುಟುಂಬಕ್ಕೆ ಮತ್ತು ಲಕ್ಷಾಂತರ ಬೆಂಬಲಿಗರಿಗೆ ಸಂತಾಪ. ಓಂ ಶಾಂತಿ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post