ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಸುಮಾರು15ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ, ಆಧುನಿಕ ಭಗೀರಥ ಎಂದೇ ಖ್ಯಾತಿ ಗಳಿಸಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಜಲಋಷಿ ಕಾಮೇಗೌಡ (84) ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರೂ ಸಹ ತಮ್ಮ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಕಾಮೇಗೌಡರ ಕಾರ್ಯವನ್ನು ಶ್ಲಾಘಿಸಿದ್ದರು.
ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಲಿ ಎಂದು ಕಾಮೇಗೌಡರು ಕೈಯಾರೆ 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು. ಜೊತೆಗೆ ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ಕುರಿ ಕಾಯುವ ಕೆಲಸವನ್ನು ಹವ್ಯಾಸವಾಗಿ ಮಾಡುತ್ತಿದ್ದರು. ಕಾಮೇಗೌಡರಿಗೆ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
Also read: ನಿಗದಿತ ಅವಧಿಯೊಳಗೆ ಫ್ಲೈ ಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ರಾಘವೇಂದ್ರ ತಾಕೀತು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















