ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಜಂಟಿ ಕಾರ್ಯದರ್ಶಿ ನವನೀತ್ ಕೊಠಾರಿ ಅವರನ್ನು ಸಂಸದ ಬಿ.ವೈ. ರಾಘವೇಂದ್ರ MP Raghavendra ಭೇಟಿ ಮಾಡಿ ರಾಜ್ಯದ ಕರಾವಳಿಯ ಜಿಲ್ಲೆಗಳ ಮೀನುಗಾರಿಕೆ ಕೇಂದ್ರದಿಂದ ಸೀಮೆಎಣ್ಣೆಯನ್ನು ಕೂಡಲೇ ರಾಜ್ಯಕ್ಕೆ ಬಿಡುಗಡೆ ಮಾಡಬೇಕೆಂದು ಕೋರಿದರು.
ಕೇಂದ್ರ ಸರ್ಕಾರ ಈಗಾಗಲೇ ರಾಜ್ಯಕ್ಕೆ 2472 ಕೆಎಲ್ ಮಂಜೂರಾತಿ ನೀಡಿದ್ದು, ಬಾಕಿ ಉಳಿದಿರುವ 21618 ಕೆಎಲ್ ಸೀಮೆಎಣ್ಣೆಯನ್ನು ಸಹ ಕೂಡಲೇ ಬಿಡುಗಡೆ ಮಾಡಲು ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ, ಜಂಟಿ ಕಾರ್ಯದರ್ಶಿಗಳು ಒಂದು ವಾರದ ಒಳಗಾಗಿ ಮಂಜೂರಾತಿ ಆದೇಶವನ್ನು ಹೊರಡಿಸುವುದಾಗಿ ಭರವಸೆ ನೀಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















