ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮದ ವತಿಯಿಂದ ಅ.21ರಂದು ಬೆಳಗ್ಗೆ 8.30 ಗಂಟೆಗೆ ತಲಕಾವೇರಿಯಲ್ಲಿ ಕಾವೇರಿ ನದಿ ಉತ್ಸವ-2022 ಕಾರ್ಯಕ್ರಮ ಆಯೋಜಿಸಲಾಗಿದೆ.
ತಲಕಾವೇರಿ ಕ್ಷೇತ್ರದಲ್ಲಿ ಗಣಪತಿ ಮತ್ತು ಈಶ್ವರ ಮಂದಿರದಲ್ಲಿ ಪೂಜೆ, ನಂತರ ಬ್ರಹ್ಮಕುಂಡಿಕೆ ಬಳಿ ಪೂಜೆ, ಗಣ್ಯರಿಂದ ಕಾವೇರಿ ನದಿ ಉತ್ಸವಕ್ಕೆ ಚಾಲನೆ ದೊರೆಯಲಿದೆ.
ಬಳಿಕ ಬೆಳಗ್ಗೆ 11 ಗಂಟೆಗೆ ಭಾಗಮಂಡಲದಲ್ಲಿ ಕಾವೇರಿ ನದಿ ಉತ್ಸವದ ಕಾರ್ಯಕ್ರಮ ನಡೆಯಲಿದ್ದು, ಭಗಂಡೇಶ್ವರ ಕ್ಷೇತ್ರದಲ್ಲಿ ಪೂಜೆ, ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಜೀವನದಿ ಕಾವೇರಿಗೆ ಮಹಾ ಆರತಿ ಬೆಳಗುವುದು ಮತ್ತು ಮಂತ್ರಘೋಷ ಹಾಗೂ ನಾಗರಿಕರಿಗೆ ನದಿ ಸಂರಕ್ಷಣೆ ಬಗ್ಗೆ ಪ್ರತಿಜ್ಞಾ ವಿಧಿ. ನಂತರ ಮಧ್ಯಾಹ್ನ 3 ಗಂಟೆಗೆ ಕುಶಾಲನಗರದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಕಾವೇರಿ ನದಿ ಉತ್ಸವದ ಸಭಾ ಕಾರ್ಯಕ್ರಮ ನಡೆಯಲಿದೆ.
ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಉದ್ಘಾಟನೆ ಮಾಡಲಿದ್ದಾರೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ, ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಪ್ರಜ್ವಲ್ ರೇವಣ್ಣ, ಶಾಸಕರಾದ ಎಚ್.ಪಿ.ಮಂಜುನಾಥ್, ಎ.ಟಿ.ರಾಮಸ್ವಾಮಿ, ಸಾ.ರಾ.ಮಹೇಶ್, ಕೆ.ಮಹದೇವ್, ಎಂ.ಪಿ.ಸುಜಾ ಕುಶಾಲಪ್ಪ, ಆಯನೂರು ಮಂಜುನಾಥ್, ಎಸ್.ಎಲ್.ಬೋಜೇಗೌಡ, ಸೂರಜ್ ರೇವಣ್ಣ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ಕುಶಾಲನಗರ ಪ.ಪಂ. ಅಧ್ಯಕ್ಷರಾದ ಜಯವರ್ಧನ್, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಪೆಮಿತಾ ಇತರರು ಪಾಲ್ಗೊಳ್ಳಲಿದ್ದಾರೆ.
ಕುಶಾಲನಗರದ ಅಯ್ಯಪ್ಪಸ್ವಾಮಿ ದೇವಸ್ಥಾನದ ಹತ್ತಿರ ಸಂಜೆ 6 ಗಂಟೆಯಿಂದ ಕಾವೇರಿ ನದಿ ಉತ್ಸವದ ಕಾರ್ಯಕ್ರಮ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post