ಕಲ್ಪ ಮೀಡಿಯಾ ಹೌಸ್ | ಗೋಪೇಶ್ವರ್ |
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಭೂಕುಸಿತ ಸಂಭವಿಸಿದ್ದು, ನಂತರ ಹಲವಾರು ಮನೆಗಳ ಮೇಲೆ ಬಂಡೆಗಳು ಬಿದ್ದು ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಶುಕ್ರವಾರ ಮತ್ತು ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪಿಂಡಾರ್ ಕಣಿವೆಯ ಪೈಂಗರ್ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಭೂಕುಸಿತದ ನಂತರ ಗ್ರಾಮದ ಮೂರು ಮನೆಗಳ ಮೇಲೆ ಬಂಡೆಗಳು ಬಿದ್ದು ನೆಲಸಮವಾಗಿವೆ. ಅವಶೇಷಗಳಡಿಯಲ್ಲಿ ಐವರು ಸಿಲುಕಿಕೊಂಡಿದ್ದರು. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಎಂದು ತರಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ರವೀಂದ್ರ ಕುಮಾರ್ ಜುವಾಂತ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post