ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಚಳ್ಳಕೆರೆ ಠಾಣೆ ಸಿಪಿಐ ಜಿ.ಬಿ. ಉಮೇಶ್ CPI Umesh ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆ ದಾವಣಗೆರೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಉಮೇಶ್ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಘಟನೆ ಹಿನ್ನೆಲೆ:
ಇನ್ಸ್‌ಪೆಕ್ಟರ್ ಉಮೇಶ್ ವಿರುದ್ಧ ಆತನ ಸಂಬಂಧಿ ಯುವತಿಯೋರ್ವಳು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಐದು ವರ್ಷದ ಹಿಂದೆ ದಾವಣಗೆರೆಯಲ್ಲಿ ಉಮೇಶ್ ಇನ್ಸ್ ಪೆಕ್ಟರ್ ಆಗಿದ್ದ ಸಂದರ್ಭದಲ್ಲಿ ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಕೇಳಿ ಅವರ ಬಳಿ ತೆರಳಿದಾಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದರು. ಅವರು ಬಳಿಕ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ನಡೆಸಿದ್ದಾರೆ. ಹಾಗೂ ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದಾಗ ಅತ್ಯಾಚಾರ ನಡೆಸಿರುವುದಲ್ಲದೆ, ಐದು ಬಾರಿ ಯುವತಿಗೆ ಗರ್ಭಪಾತ ಮಾಡಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಸಿಪಿಐ ಉಮೇಶ್‌ಗೆ ಅವರಿಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದು, ಮೂರನೇ ಹೆಂಡತಿಯಾಗಿ ಇರುವಂತೆ ಒತ್ತಡ ಹಾಕಿದ್ದಾರೆ. ದಾವಣಗೆರೆಯ ನಿವೇಶನ ನಿಮಗೆ ಸಿಗದಂತೆ ಮಾಡುತ್ತೇನೆ. ಹಾಗೂ ನಿಮ್ಮ ತಂದೆ ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಪ್ರಾಣ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಉಮೇಶ್ ವಿರುದ್ಧ ಸಂತ್ರಸ್ಥ ಯುವತಿ ಪ್ರಕರಣ ದಾಖಲಿಸಿದ್ದು, ದೂರು ದಾಖಲಾದ ಬೆನ್ನಲ್ಲೆ ಸಿಪಿಐ ಉಮೇಶ್ ನಾಪತ್ತೆಯಾಗಿರುದು ಹಲವು ಅನುಮಾನಗಳನ್ನು ಮೂಡಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















