ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕರವರು ಮುದ್ದಿನಕೊಪ್ಪ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 25 ಜನ ಫಲಾನುಭವಿಗಳಿಗೆ ಉಚಿತ ಸೋಲಾರ್ ಲೈಟ್ ಗಳನ್ನು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಗ್ರಾಮ ಪಂಚಾಯತಿ ವತಿಯಿಂದ ಚೆಕ್ ವಿತರಿಸಿದರು.
ಪಂಚಾಯತಿಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಕೆಲಸಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ತಮ್ಮ ಅವಧಿಯಲ್ಲಿ ಆದಂತಹ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗ್ರಾಮಸ್ಥರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳು, ಶಶಿಕುಮಾರ್, ಕೃಷ್ಣ ನಾಯ್ಕ, ಮಂಜುನಾಥ್, ಲೋಕೆಶ್, ನಂಜೇಶ್, ಸಂಜೀವ್ ಮೂರ್ತಿ, ಪಾರ್ವತಿ ಬಾಯಿ, ಮುಂತಾದವರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















