ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರ ಚುನಾವಣಾ ಆಯೋಗ ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ಪ್ರಧಾನಿ ಮೋದಿ PM Modi ಅವರ ತವರು ಗುಜರಾತ್ನ ವಿಧಾನಸಭೆ ಚುನಾವಣೆಗೆ Gujrat Election ಮುಹೂರ್ತ ಫಿಕ್ಸ್ ಆಗಿದೆ.
ಸುದ್ದಿಗೋಷ್ಠಿಯಲ್ಲಿಂದ ಮಾತನಾಡಿದ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಮೊದಲ ಹಂತದ ಚುನಾವಣೆಯು ಡಿಸೆಂಬರ್ 1 ರಂದು (89 ಸ್ಥಾನಗಳಿಗೆ) ಮತ್ತು ಎರಡನೇ ಹಂತ ಡಿಸೆಂಬರ್ 5 ರಂದು (93 ಸ್ಥಾನಗಳಿಗೆ) ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಗುಜರಾತ್ ವಿಧಾನಸಭೆಯಲ್ಲಿ ಒಟ್ಟು 182 ಸ್ಥಾನಗಳಿದ್ದು ಬಹುಮತದ ಮ್ಯಾಜಿಕ್ ಫಿಗರ್ 92 ಆಗಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್ನಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲರಿಗೆ ಪ್ರವೇಶ ಮತ್ತು ಸೇರ್ಪಡೆಗಾಗಿ ವಿಶೇಷ ವೀಕ್ಷಕರನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post