ಕಲ್ಪ ಮೀಡಿಯಾ ಹೌಸ್ | ಹೊನ್ನಾಳಿ |
ಭಾನುವಾರ ನಾಪತ್ತೆಯಾಗಿದ್ದ ಹೊನ್ನಾಳಿ ಶಾಸಕ ರೇಣುಕಾಚಾರ್ಯ Honnali MLA Renukacharya ಅವರ ತಮ್ಮನ ಮಗ ಚಂದ್ರಶೇಖರ್ ಶವವಾಗಿ ಪತ್ತೆಯಾಗಿದ್ದು, ಇವರ ಕಾರು ತುಂಗಾ ಮೇಲ್ದಂಡೆ ಚಾನಲ್‌ನಲ್ಲಿ ಇಂದು ಸಂಜೆ ವೇಳೆಗೆ ಪತ್ತೆಯಾಗಿದೆ.
ದಾವಣಗೆರೆ ಬಳಿಯ ಕಣದಕಟ್ಟೆ ಸನಿಹ ಹಾದುಹೋಗುವ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಇಂದು ಸಂಜೆ ವೇಳೆಗೆ ಕಾರು ಪತ್ತೆಯಾಗಿದ್ದು, ಹಿಂಭಾಗದ ಸೀಟಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಂದ್ರ ಶವ ಪತ್ತೆಯಾಗಿದ್ದು, ಸದ್ಯ ಕಾರನ್ನು ಕಾಲುವೆಯಿಂದ ಮೇಲಕ್ಕೆ ತೆಗೆಯಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ರೇಣುಕಾಚಾರ್ಯ ಹಾಗೂ ಕುಟುಂಬಸ್ಥರು ಚಂದ್ರು ಶವ ಕಂಡು ಕಣ್ಣೀರು ಸುರಿಸಿದ್ದಾರೆ. ತಮ್ಮನ ಮಗನ ಶವ ಕಂಡ ರೇಣುಕಾಚಾರ್ಯ ಅವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಂದ್ರಶೇಖರ್ ತೆರಳುತ್ತಿದ್ದ ಕಾರು ಕಾಲುವೆಗೆ ಬಿದ್ದಿದ್ದು ಹೇಗೆ ಎಂಬುದಕ್ಕೆ ತನಿಖೆಯಿಂದಷ್ಟೇ ಉತ್ತರ ಸಿಗಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post