ಕಲ್ಪ ಮೀಡಿಯಾ ಹೌಸ್ | ಹೊನ್ನಾಳಿ |
ಕಾರ್ಯಕರ್ತರ ಮಧ್ಯೆ ಚಟುವಟಿಕೆಯಿಂದ ಗುರುತಿಸಿಕೊಳ್ಳುತ್ತಿದ್ದ ಯುವಕ ಚಂದ್ರಶೇಖರ್ ದಾರುಣವಾಗಿ ಸಾವನ್ನಪ್ಪಿರುವುದು ಆಶ್ಚರ್ಯಕರ ಮತ್ತು ಬೇಸರ ತಂದಿದೆ ಎಂದು ಸಂಸದ ರಾಘವೇಂದ್ರ MP Raghavendra ಹೇಳಿದರು.
ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಅಂತಿಮ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕುಟುಂಬಸ್ಥರು ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಈ ಸಂಬಂಧ ಸ್ಥಳೀಯ ಠಾಣೆಯಲ್ಲಿ ದೂರು ಕೂಡ ದಾಖಲಾಗಿದ್ದು, ಪೊಲೀಸ್ ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದರು.
Also read: ಶಾಸಕ ರೇಣುಕಾಚಾರ್ಯ ಸೋದರನ ಪುತ್ರನ ಸಾವಿನ ಬಗ್ಗೆ ಸಮಗ್ರ ತನಿಖೆ: ಮಾಜಿ ಸಿಎಂ ಯಡಿಯೂರಪ್ಪ












Discussion about this post