ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಶೋಕ್ ಪ್ರಭು ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡನೇ ಆರೋಪಿ ಅಸ್ಲಾಂನನ್ನು ಬಂಧಿಸುವಲ್ಲಿ ದೊಡ್ಡಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ SP Mithun Kumar ಹೇಳಿದರು.
ಈ ಕುರಿತು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಭು ಮೇಲೆ ಹಲ್ಲೆ ನಡೆದ ವಿಷಯಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಆಸಿಫ್ ನನ್ನು ಬಂಧಿಸಲಾಗಿದ್ದು, ಅಸ್ಲಾಂ ಶಿವಮೊಗ್ಗ ರಾಶಿ ಡೆವೆಲಪರ್ಸ್ ಲೇಔಟ್ ನಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ದೊಡ್ಡಪೇಟೆ ಪೊಲೀಸ್ ಸಬ್ ಇನ್ಸ್ ಸ್ಪೆಕ್ಟರ್ ವಸಂತ್ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದಾಗ ಅಸ್ಲಾಂ ಪೊಲೀಸ್ ಸಿಬ್ಬಂದಿ ರಮೇಶ್ ಅವರಿಗೆ ಚಾಕು ಬೀಸಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ರಮೇಶ್ ಅವರ ತೋಳಿಗೆ ಗಾಯವಾಗಿದ್ದು, ಪೊಲೀಸ್ ಸಿಬ್ಬಂದಿ ರಕ್ಷಣೆ ಜೊತೆಗೆ ವಸಂತವರು ಅಸ್ಲಾಂ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಅಪರ ಜಿಲ್ಲಾ ರಕ್ಷಣಾಧಿಕಾರಿ ವಿಕ್ರಂ ಆಮ್ಟೆ, ಡಿವೈಎಸ್ಪಿ ಬಾಲರಾಜ್ , ಎಸೈ ವಸಂತ್ ಉಪಸ್ಥಿತರಿದ್ದರು.











Discussion about this post