ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಡ್ರಗ್ಸ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಓರ್ವ ರೂಢಿಗತ ಡ್ರಗ್ ಪೆಡ್ಲರ್‌ನನ್ನು ವಶಕ್ಕೆ ಪಡೆದು ಆತನಿಂದ ಸುಮಾರು 20 ಲಕ್ಷ ರೂ ಮೌಲ್ಯದ ನಿಷೇಧಿತ ಮಾದಕ ವಸ್ತುವಾದ 230 ಗ್ರಾಂ ತೂಕದ ಎಂ.ಡಿ.ಎಂ.ಎ ಕ್ರಿಸ್ಟೆಲ್ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಬಂಧಿತನಿಂದ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ಸೇರಿದಂತೆ ಒಂದು ದ್ವಿಚಕ್ರ ವಾಹನ, ೨ ಮೊಬೈಲ್ ಫೋನ್‌ಗಳು ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Also read: ಪ್ರಾಚೀನ ಕಲ್ಯಾಣಿ ಜೀರ್ಣೋದ್ಧಾರಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಗ್ರಾಪಂ ಇಒ ಸೂಚನೆ
ಬಂಧಿತ ಆರೋಪಿಯ ವಿರುದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ-1985 ಮತ್ತು ವಿದೇಶಿಯರ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.












Discussion about this post