ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನ.9 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ತಾಲ್ಲೂಕಿನ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-6(ಕಲ್ಲೂರು ಮಂಡ್ಲಿ), ಎಫ್-8(ರಾಮಿನಕೊಪ್ಪ) ಮತ್ತು ಎಫ್-17(ಹಾಯ್‍ಹೊಳೆ) ಮಾರ್ಗದ ವ್ಯಾಪ್ತಿಯಲ್ಲಿ ಹೆದ್ದಾರಿ ವತಿಯಿಂದ ರಸ್ತೆ ಅಗಲೀಕರಣ ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಅನುಪಿನಕಟ್ಟೆ, ಪೋದಾರ್ ಶಾಲೆ, ಪುರದಾಳು, ಅಗಸವಳ್ಳಿ, ಹಾಯ್‍ಹೊಳೆ, ರಾಮೇನಕೊಪ್ಪ, ಕಲ್ಲೂರು, ಹೊಸೂರು, ಬೈರಾಪುರ, ಕೌಲಾಪುರ, ಬೆಳ್ಳೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ನಗರ ಉವಿ-2 ರ ಘಟಕ-5 ಮತ್ತು 6ರ ಮಂಡ್ಲಿ 100 ಅಡಿ ರಸ್ತೆಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.9 ರಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ದುರ್ಗಿಗುಡಿ, ಗಾರ್ಡನ್ ಏರಿಯಾ, ನೆಹರು ರಸ್ತೆ, ಇಲಿಯಾಜ್‍ನಗರ 1 ಮತ್ತು 14ನೇ ಕ್ರಾಸ್, ಟಿಪ್ಪುನಗರ, ಮಂಜುನಾಥ ಬಡಾವಣೆ, ಮಂಡಕ್ಕಿಭಟ್ಟಿ, ಫಾರೂಕ್ಯ ಶಾದಿಮಹಲ್, ಎಸ್.ಜೆ. ಶಾದಿಮಹಲ್, ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಮಲ್ಲಿಕಾರ್ಜುನ ಬಡಾವಣೆ, ಕಲ್ಲೂರು ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಮದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ, ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post