ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ, ೬೧೫ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೊಹಮ್ಮದ್ ಫೀರ್ (21), ಯೂಸೂಫ್ ಖಾನ್ (20) ಮತ್ತು ಮೊಹಮ್ಮದ್ ಆಸೀಫ್ (21) ಬಂಧಿತರಾಗಿದ್ದು, ಆರೋಪಿಗಳಿಂದ 20,000ರೂ. ಮೌಲ್ಯದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.
ಶಿವಮೊಗ್ಗ ಉಪವಿಭಾಗ ಡಿವೈಎಸ್‌ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆ ಮುಂದುವರೆದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















