ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆದೇಶ ಹೊರಡಿಸಿದ್ದು, ದೀಪಕ್ ಸಿಂಗ್ ಅವರು ತಕ್ಷಣ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post