ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ(ವಿಜಯನಗರ) |
ರಾಜ್ಯದ ಎಲ್ಲಾ ನಿವಾಸಿಗಳಿಗೆ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಯನ್ನು ಕರ್ನಾಟಕ ಸರ್ಕಾರವು 2018ನೇ ಮಾ.2ರಿಂದ ಅನುಷ್ಟಾನಗೊಳಿಸಲಾಗಿದ್ದು, ನಂತರ ಭಾರತ ಸರ್ಕಾರವು ಆಯುಷ್ಮಾನ್ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಈ ಎರಡು ಯೋಜನೆಗಳ ಉದ್ದೇಶ ವ್ಯಾಪ್ತಿಗಳಲ್ಲಿ ಹೋಲಿಕೆ ಇರುವುದರಿಂದ ಎರಡೂ ಯೋಜನೆಗಳನ್ನು ಸಂಯೋಜಿಸಿ ‘ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕʼ ಎಂಬ ಯೋಜನೆಯನ್ನು ಅನುಷ್ಟಾನಗೊಳಿಸಿರುತ್ತದೆ ಎಂದು ವಿಜಯನಗರ ಅಪರ ಜಿಲ್ಲಾಧಿಕಾರಿ ಟಿ.ವಿ.ಪ್ರಕಾಶ ಅವರು ತಿಳಿಸಿದ್ದಾರೆ.
ಆಯುಷ್ಮಾನ್ ಭಾರತ ಹೆಲ್ತ್ ಅಕೌಂಟ್ ಕಾರ್ಡ್‍ನ್ನು ಪಡೆಯಲು ವಿಜಯನಗರ ಜಿಲ್ಲೆಯಲ್ಲಿ 108 ಗ್ರಾಮಒನ್ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ತಮ್ಮ ಗ್ರಾಮಕ್ಕೆ ಹತ್ತಿರವಿರುವ ಗ್ರಾಮ ಒನ್ ಅಥವಾ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಆಧಾರ್ ಕಾರ್ಡ್ ಪ್ರತಿ, ಹಾಗೂ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಪ್ರತಿ. ಆಧಾರ್ ಕಾರ್ಡ್‍ಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ. ಪಡಿತರ ಚೀಟಿ(ರೇಷನ್ ಕಾರ್ಡ್)ಯನ್ನು ಸಲ್ಲಿಸಬೇಕು. ಮನೆಯ ಎಲ್ಲಾ ಸದಸ್ಯರ ಆ.ಭಾ ಕಾರ್ಡನ್ನು ಒಬ್ಬ ಸದಸ್ಯ ನೋಂದಣಿ ಮಾಡಬಹುದು, ನೋಂದಣಿ ಮಾಡಲು ಎಲ್ಲರ ಆಧಾರ್ ಕಾರ್ಡಿನ ಪ್ರತಿ ನೀಡತಕ್ಕದ್ದು, ಮತ್ತು ಆಧಾರ್ ಕಾರ್ಡ್‍ಗೆ ಜೋಡಣೆಯಾಗಿರುವ ಮೊಬೈಲ್ ನಂಬರಿಗೆ ಬರುವ ಓಟಿಪಿಯನ್ನು ತಿಳಿಸಬೇಕಾಗುತ್ತದೆ.
Also read: ಮುಂಗಡ ಹಣ ಪಡೆದೂ ಪ್ಲಾಟ್ ನೀಡದ ಬಿಲ್ಡರ್’ಗೆ 5 ಲಕ್ಷ ರೂ. ದಂಡ ವಿಧಿಸಿದ ಗ್ರಾಹಕ ಆಯೋಗ
ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವವರು ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯ. ಎಪಿಎಲ್ ಕಾರ್ಡುದಾರರು ಅಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರ ಪಾಕೇಜ್ ದರದ 30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.5ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು. ಒಟ್ಟು 1650 ಚಿಕಿತ್ಸೆಗಳು ಲಭ್ಯವಿದ್ದು, ಸದರಿ ಆರೋಗ್ಯ ಕಾರ್ಡ್ ಪಡೆದುಕೊಂಡು ಸೌಲಭ್ಯ ಪಡೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.












Discussion about this post