ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು, ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿ, ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Araga Gnanendra ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ, ಕೇಂದ್ರ ಸರ್ಕಾರ, ತಕ್ಷಣ ಸ್ಪಂದಿಸಿದ್ದು, ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ, ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿ ಎಂದು ಹಾರೈಸಿದ್ದಾರೆ.

ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ಎಲೆ ಚುಕ್ಕೆ ರೋಗಕ್ಕೆ ಬಲಿಯಾಗಿದ್ದು, ಕಾಳ್ಗಿಚ್ಚಿನಂತೆ ಇತರೆಡೆ ಹರಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ನ. 22 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿಗೆ ಆಗಮಿಸುವ ಸಂಶೋಧನಾ ತಜ್ಞರನ್ನು ಭೇಟಿಯಾಗಿ, ಪರಿಸ್ಥಿತಿಯ ಮನವರಿಕೆ ಮಾಡಿಕೊಡುವೆ ಎಂದು ತಿಳಿಸಿದ್ದಾರೆ.

Also read: ಗಮನಿಸಿ! ಈ ಎರಡು ದಿನ ಶಿವಮೊಗ್ಗ ನಗರದಲ್ಲಿ ನೀರು ಸರಬರಾಜು ಇರುವುದಿಲ್ಲ
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯದ ಅಡಿಕೆ ಬೆಳೆ. ಇದಕ್ಕೆ ಎಲೆ ಚುಕ್ಕೆ ರೋಗದಿಂದ ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ನಿಯೋಗದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಗೃಹ ಸಚಿವ ಆರಗ e್ಞÁನೇಂದ್ರ, ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ಎಂಎಲ್’ಸಿ ಕೃಷ್ಣ ಭಟ್ ಸೇರಿದಂತೆ ಇತರ ಗಣ್ಯರೂ ಇದ್ದರು.












Discussion about this post