ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇತ್ತೀಚೆಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆ ಪ್ರಥಮ ಸ್ಥಾನ ಗಳಿಸಿದೆ.
ಭಾರತ್ ಸ್ಕೌಟ್ ಮತ್ತು ಗೈಡ್ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಬಹುಮಾನ ಗಳಿಸುವ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಜೈನ್ ಪಬ್ಲಿಕ್ ಶಾಲೆ ಆಯ್ಕೆಯಾಗಿದೆ.
ಇನ್ನು, ಸಹ್ಯಾದ್ರಿ ಸಹೋದಯ ಶಾಲಾ ಸಂಕೀರ್ಣ ಅಡಿಯಲ್ಲಿ ಆಯೋಜಿಸಲಾಗಿದ್ದ ಅಂತರ್ ಜಿಲ್ಲಾ ವಾಲಿಬಾಲ್ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆ ದ್ವಿತೀಯ ಸ್ಥಾನ ಗಳಿಸಿದೆ.
Also read: ಗಮನಿಸಿ! ನ.18ರಂದು ಶಿವಮೊಗ್ಗದ ಈ ಎಲ್ಲ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಅಂಡರ್ 17 ವಿಭಾಗದಲ್ಲಿ ಬಾಲಕರು ದ್ವಿತೀಯ ಸ್ಥಾನ ಹಾಗೂ ಅಂಡರ್ 16 ವಿಭಾಗದಲ್ಲಿ ಬಾಲಕಿಯರು ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಈ ಎಲ್ಲ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಹಾಗೂ ಶಾಲೆಯ ಸಿಬ್ಬಂದಿ ಅಭಿನಂದಿಸಿದ್ದಾರೆ.

ಪ್ರಾಂಶುಪಾಲರಾದ ಪ್ರಿಯದರ್ಶಿನಿ, ಶಾಲಾ ಸಂಯೋಜಕಿ ದಿವ್ಯಾಶೆಟ್ಟಿ, ಸಿಇಒ ಸುಮಂತ್, ಸೌಲಭ್ಯ ವ್ಯವಸ್ಥಾಪಕರಾದ ವಿಜಯ್ ಕುಮಾರ್, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಇದ್ದರು.













Discussion about this post