ಕಲ್ಪ ಮೀಡಿಯಾ ಹೌಸ್ | ಸಾಗರ |
ಶಿವಮೊಗ್ಗದ ಈಡಿಗರ ಭವನದಲ್ಲಿ ನ.18ರಂದು ಮಧ್ಯಾಹ್ನ 12 ಗಂಟೆಗೆ ಹಕ್ಕೊತ್ತಾಯ ಪೂರ್ವ ಸಮಾಲೋಚನಾ ಸಭೆ ಆಯೋಜಿಸಲಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ ಹಾಲಪ್ಪ MLA Halappa ಕರೆ ನೀಡಿದ್ದಾರೆ.
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಮನವರಿಕೆ ಮತ್ತು ಹಕ್ಕೊತ್ತಾಯ ಮಾಡಲು ನ.25ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರನ್ನು ಶಿವಮೊಗ್ಗಕ್ಕೆ ಆಹ್ವಾನಿಸಲಾಗಿದ್ದು, ಅದರ ಪೂರ್ವಭಾವಿಯಾಗಿ ಸಭೆ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, B S Yadiyurappa ಸಂಸದ ಬಿ.ವೈ. ರಾಘವೇಂದ್ರ, MP Raghavendra ಗ್ರಾಮಾಂತರ ಶಾಸಕ ಅಶೋಕ ನಾಯ್ಕ್ ಉಪಸ್ಥಿತರಿರಲಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post