ಕಲ್ಪ ಮೀಡಿಯಾ ಹೌಸ್ | ಮುಂಬೈ |
ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ತಂದೆ, ಚಿಕ್ಕಪ್ಪ ಮತ್ತು ಅಜ್ಜನೇ ಹಲವಾರು ಬಾರಿ ಅತ್ಯಾಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪ್ರಸ್ತುತ ತಾನು ಓದುತ್ತಿರುವ ಪುಣೆಯ ಕಾಲೇಜಿನಲ್ಲಿ ಲೈಂಗಿಕ ಕಿರುಕುಳದ ಕುರಿತು ವಿಶಾಖಾ ಸಮಿತಿಯ ಸದಸ್ಯರ ಮುಂದೆ ಹುಡುಗಿ ಇತ್ತೀಚೆಗೆ ತನಗಾದ ಸಂಕಷ್ಟವನ್ನು ಹೇಳಿಕೊಂಡಿದ್ದಾಳೆ.
ಈ ಘಟನೆ ಸಂಬಂಧ ಸಂತ್ರಸ್ತೆಯ ತಂದೆಯನ್ನು ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿಭಾಗಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ..
ಸಂತ್ರಸ್ತ್ರ ಹುಡುಗಿ 2016 ಮತ್ತು 2018ರ ನಡುವೆ ಉತ್ತರ ಪ್ರದೇಶದಲ್ಲಿ ತನ್ನ ತವರು ಮನೆಯಲ್ಲಿದ್ದಾಗ, ತನ್ನ ಚಿಕ್ಕಪ್ಪ ಅನೇಕ ಬಾರಿ ಅತ್ಯಾಚಾರವೆಸಗಿದ್ದು, ಅಜ್ಜ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post