ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲೂಕು ಬ್ಲಾಕ್ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರನ್ನಾಗಿ ಕೆ.ಪಿ. ಪ್ರವೀಣ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ರಾಷ್ಟ್ರೀಯ ಯುವ ಕಾಂಗ್ರೆಸ್ ನಿರ್ದೇಶನ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಆದೇಶದಂತೆ ಪ್ರವೀಣ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ತತಕ್ಷಣದಿಂದಲೇ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕು ಎಂದು ಪ್ರವೀಣ್ ಅವರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್ ತಿಳಿಸಿದ್ದಾರೆ.
ವರದಿ: ಮಧುರಾಮ್, ಸೊರಬ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















