No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಹರಿಪಾದ ಸೇರಿದ ಖ್ಯಾತ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ

ಮಾಧ್ವ ಸಾರಸ್ವತ ಲೋಕದಲ್ಲಿ ಮಡುಗಟ್ಟಿದ ಶೋಕ | ನಿಬ್ಬೆರಗಾಗಿಸುವ ಆಚಾರ್ಯರ ಸಾಧನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 21, 2022
in ಹುಬ್ಬಳ್ಳಿ-ಧಾರವಾಡ
0
ಹರಿಪಾದ ಸೇರಿದ ಖ್ಯಾತ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಧಾರವಾಡ |

ರಾಜ್ಯದ ಪ್ರಸಿದ್ಧ ವಿದ್ವಾಂಸರಾಗಿದ್ದ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ(73) ಅವರು ಹರಿಪಾದ ಸೇರಿದ್ದು, ನಿನ್ನೆ ಸಂಜೆ ಆಚಾರ್ಯರ ಅಂತ್ಯಸAಸ್ಕಾರ ನೆರವೇರಿತು.

ಮಾಧ್ವ ಪ್ರಪಂಚದ ಖ್ಯಾತ ಪಂಡಿತ ಶ್ರೇಷ್ಠರು, ವಾಗ್ರಿಗಳು, ಲೇಖಕರು ಶ್ರೀಸತ್ಯಪ್ರಮೋದ ತೀರ್ಥ ಶ್ರೀಪಾದಂಗಳವರು ಮತ್ತು ಶ್ರೀಸತ್ಯಾತ್ಮ ತೀರ್ಥ ಶ್ರೀಪಾದಂಗಳವರ ವಿಶೇಷ ಅನುಗ್ರಹಕ್ಕೆ ಪಾತ್ರರಾದ ಧ್ಯಾನಪ್ರಮೋದ ಪುರಸ್ಕೃತರು. ಶ್ರೀ ಹರಿಗೆ ಇಷ್ಟವಾದ ದಿನದಂದೇ ಹರಿಪಾದ ಸೇರಿರುವುದು ವಿಶೇಷ.
ಆಚಾರ್ಯರ ಕಿರು ಪರಿಚಯ
ಪಂಡಿತ ಮಳಗಿ ಜಯತೀರ್ಥಾಚಾರ್ಯರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ, ಧಾರವಾಡದ ವೇದವ್ಯಾಸ ವಿದ್ಯಾಪೀಠದ ಸ್ಥಾಪಕ ಅಧ್ಯಕ್ಷರಾಗಿ, ಅನೇಕ ಗ್ರಂಥಗಳ ಕರ್ತೃವಾಗಿ, ಧಾರ್ಮಿಕ ಪತ್ರಿಕೆಗಳ ಸಂಪಾದಕರಾಗಿ, ಪ್ರವಚನಕಾರರಾಗಿ ಮಾಧ್ವವಾಙ್ಮಯಕ್ಕೆ ವಿಶೇಷವಾಗಿ ಸೇವೆ ಸಲ್ಲಿಸಿದ ವಿದ್ವಾಂಸರು.

ಪಂಡಿತ ಮಳಗಿ ಜಯತೀರ್ಥಾಚಾರ್ಯರು. ಧಾರವಾಡನಗರವನ್ನು ಮಾಧ್ವಸಿದ್ಧಾಂತದ ಮಹಾಕೇಂದ್ರವನ್ನಾಗಿ ರೂಪಿಸಿದ ಮಹನೀಯರಲ್ಲಿ ಪ್ರಮುಖರಾದ ಶ್ರೀಮಳಗಿ ಜಯತೀರ್ಥಾಚಾರ್ಯರು ಜನಿಸಿದ್ದು 1949ರ ಜೂನ್ 5ರಂದು. ಜವಾಹರಲಾಲ್ ಸಂಸ್ಕೃತವಿದ್ಯಾಲಯದಿಂದ ಸಾಹಿತ್ಯ ಶಿರೋಮಣಿ, ಭಾರತೀಯ ವಿದ್ಯಾಭವನ, ಮುಂಬಯಿಯಿಂದ ಸಂಸ್ಕೃತಕೋವಿದ, ವಾರಣಾಸಿಯ ಸಂಪೂರ್ಣಾನಂದ ಸಂಸ್ಕೃತವಿಶ್ವವಿದ್ಯಾನಿಲಯದಿಂದ ವೇದಾಂತ ಶಾಸ್ತ್ರಿ, ಧರ್ಮಶಾಸ್ತ್ರಾಚಾರ್ಯ, ಅಲಹಾಬಾದ್ ಹಿಂದಿ ವಿಶ್ವವಿದ್ಯಾಲಯದಿಂದ ದರ್ಶನವಿಶಾರದ, ಹಿಂದಿ ವಿಶಾರದ, ಹಿಂದಿ ಸಾಹಿತ್ಯರತ್ನ, ಭಾರತೀಯ ವಿದ್ಯಾಭವನದಿಂದ ವೇದಾಂತ ವಾಚಸ್ಪತಿ, ಮುಂಬಯಿ ವಿಶ್ವವಿದ್ಯಾನಿಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪಡವಿ, ಪೂನಾ ವಿಶ್ವವಿದ್ಯಾನಿಲಯದಿಂದ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಶ್ರೀಮಳಗಿ ಜಯತೀರ್ಥಾಚಾರ್ಯರು ಮುಂಬಯಿಯ ಶ್ರೀಸತ್ಯಧ್ಯಾನ ವಿದ್ಯಾಪೀಠದಲ್ಲಿ ವೇದಾಂತ, ನ್ಯಾಯ, ಮೀಮಾಂಸಾ, ಸಾಹಿತ್ಯ,ವ್ಯಾಕರಣ ಮೊದಲಾದ ಶಾಸ್ತ್ರಗಳ ಆಳವಾದ ಅಧ್ಯಯನವನ್ನು ನಡೆಸಿ, ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಸಂಸ್ಕೃತವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಮಾಧ್ವ ವಾಙ್ಮಯಕ್ಕೆ ಹಾಗೂ ಸಂಸ್ಕೃತ ಸಾಹಿತ್ಯಕ್ಕೆ ಸಂಬಂಧಿಸಿದ ಅಸಂಖ್ಯ ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುವ ಶ್ರೀಮಳಗಿ ಜಯತೀರ್ಥಾಚಾರ್ಯರು ರಚಿಸಿರುವ ಗ್ರಂಥಗಳು 43ಕ್ಕೂ ಹೆಚ್ಚು ಎಂಬುದನ್ನು ಗಮನಿಸಿದಾಗ, ಶ್ರೀಆಚಾರ್ಯರ ಸಾರಸ್ವತ ಸೇವೆಯ ಕಿಂಚಿತ್ತು ಪರಿಚಯ ನಮಗಾಗುತ್ತದೆ. ಶ್ರೀಸತ್ಯಧ್ಯಾನರು, ಶ್ರೀಸತ್ಯಧ್ಯಾನರ ನುಡಿಮುತ್ತುಗಳು, ಕುಲಪತಿ, ಕ್ಷೇಮೇಂದ್ರನ ಸುಭಾಷಿತಗಳು, ಲೇಖನ ತರಂಗಿಣಿ, ಷಟ್ ಪ್ರಶ್ನೋಪನಿಷತ್ತು, ಪ್ರಮೋದ ತರಂಗಿಣೀ, ಸತ್ಯಧ್ಯಾನ ಜೀವನ ರಶ್ಮಿ,ಸತ್ಯಧ್ಯಾನ ಚರಿತಾಮೃತ, ಶ್ರೀಮಧ್ವರು ನಿರೂಪಿಸಿದ ರಾಮ, ಮಧ್ವರು ನಿರೂಪಿಸಿದ ಶ್ರೀಸೀತಾ, ಮಾಧವತೀರ್ಥರು, ಉತ್ತರಾದಿ ಮಠದ ಇತಿಹಾಸ, ಹರಿದಾಸಸಾಹಿತ್ಯದ ಇತಿಹಾಸ, ಶ್ರೀಸತ್ಯಬೋಧತೀರ್ಥರು, ಶ್ರೀಸತ್ಯವೀರತೀರ್ಥರು, ಶ್ರೀಸತ್ಯಧ್ಯಾನತೀರ್ಥರು(ಇಂಗ್ಲೀಷ್), ಶ್ರೀಸತ್ಯಸಂಧರು, ಪ್ರಮೋದ ತರಂಗಿಣೀ(ಇಂಗ್ಲಿಷ್), ಹರಿದಾಸರ ಮುಂಡಿಗೆಗಳು, ಹರಿದಾಸರ ಮುಂಡಿಗೆಗಳು ಭಾಗ 2, ಶ್ರೀಜಯತೀರ್ಥವಿಜಯ, ಶ್ರೀಸತ್ಯಧ್ಯಾನ ವಾಣಿ, ಶ್ರೀವ್ಯಾಸ ಮಧ್ವರ ಭೀಮ, ಶ್ರೀಸತ್ಯಧ್ಯಾನ ಲೇಖನತರಂಗಿಣಿ (ಎರಡು ಭಾಗಗಳಲ್ಲಿ), ಶ್ರೀರಾಘವೇಂದ್ರ ವಿದ್ಯಾವೈಭವ, ಕನಕನ ಮುಂಡಿಗೆಗಳು, ಶ್ರೀಪದ್ಮನಾಭತೀರ್ಥರು, ದೇವಲಸ್ಮೃತಿ ಒಂದು ಅಧ್ಯಯನ, ತೊರವಿ ರಾಮಾಯಣ ಪ್ರಶಸ್ತಿ, ಗೋಪಾಲದಾಸರು ಕಂಡ ಗುರುರಾಜರು, ಶ್ರೀಸತ್ಯಜ್ಞಾನತೀರ್ಥರು, ಶ್ರೀಕೃಷ್ಣಾವತಾರ, ವಾಸ್ತುಶಾಸ್ತ್ರದ ಮಹತ್ತ್ವ, ಶ್ರೀಹನುಮಂತದೇವರು, ಶ್ರೀಕೃಷ್ಣ, ಶ್ರೀಜಯತೀರ್ಥರು, ಪೊಡವಿಗೊಡೆಯ ಕಡಗೋಲಶ್ರೀಕೃಷ್ಣ, ಬೆಳಕಿನ ಬರಹಗಳು-ಹೀಗೆ ತಮ್ಮ ವಿದ್ವತ್ಪೂರ್ಣಗ್ರಂಥಗಳಿಂದ ಮಾಧ್ವವಾಙ್ಮಯವನ್ನು ಶ್ರೀಮಂತಗೊಳಿಸಿರುವ ಶ್ರೀಜಯತೀರ್ಥಾಚಾರ್ಯರು ಉತ್ತರಾದಿಮಠದಿಂದ ಪ್ರಕಟವಾಗುತ್ತಿರುವ ಶ್ರೀಸುಧಾ ಮಾಸಿಕದ ಮುಖ್ಯ ಸಂಪಾದಕರಾಗಿ ಮೂವತ್ತು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಇದರೊಂದಿಗೆ ಧಾರವಾಡದ ಸತ್ಯಧ್ಯಾನ ಗ್ರಂಥಮಾಲೆ, ಟಿ.ಟಿ.ಡಿಯ ದಾಸಸಾಹಿತ್ಯ ಪ್ರಾಜೆಕ್ಟ್ ನ ಗ್ರಂಥಗಳ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಸುಗುಣಮಾಲಾ, ಹರಿದಾಸವಾಹಿನಿ, ಹರಿದಾಸ ಅಧ್ಯಾತ್ಮ ಪೀಠ, ಸತ್ಯಧ್ಯಾನವಿದ್ಯಾಪೀಠ, ವಿಶ್ವಮಾಧ್ವ ಮಹಾಪರಿಷತ್ತಿನ ಗ್ರಂಥಗಳ ಸಂಪಾದಕ ಮಂಡಳಿಯ ಸದಸ್ಯರಾಗಿಯೂ ವಾಙ್ಮಯಸೇವೆಯನ್ನು ಸಲ್ಲಿಸಿದ ಶ್ರೀಜಯತೀರ್ಥಾಚಾರ್ಯರಿಗೆ ವಿವಿಧ ಮಾಧ್ವ ಮಠಾಧೀಶರು ಅನೇಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿ, ಅನುಗ್ರಹಿಸಿದ್ದಾರೆ.

Also read: ಮಂಗಳೂರು ರಿಕ್ಷಾ ಬ್ಲಾಸ್ಟ್’ಗೆ ತೀರ್ಥಹಳ್ಳಿ ಲಿಂಕ್! ಉಗ್ರ ಶಾರಿಕ್ ಮನೆಯಲ್ಲಿ ತಪಾಸಣೆ, ಕುಟುಂಬಸ್ಥರ ವಿಚಾರಣೆ
ಶ್ರೀಪಲಿಮಾರು ಶ್ರೀಗಳಿಂದ ‘ಪಂಡಿತರತ್ನಂ’, ಪ್ರಶಸ್ತಿ, ಸಚ್ಛಾಸ್ತ್ರವಿಚಕ್ಷಣರತ್ನಂ, ಶ್ರೀವಿದ್ಯಾಮಾನ್ಯ ಪ್ರಶಸ್ತಿ,ವಿದ್ಯಾನಿಧಿ ಪ್ರಶಸ್ತಿ, ಶ್ರೀಪೇಜಾವರ ಮಠಾಧೀಶರಿಂದ ‘ವಿಜಯಧ್ವಜ ಪ್ರಶಸ್ತಿ’, ಶ್ರೀ ಭಂಡಾರಕೇರಿ ಶ್ರೀಗಳಿಂದ ‘ವಾಗ್ವೈಖರಿಮಾನ್ಯ’ಪ್ರಶಸ್ತಿ ಹಾಗೂ ಶ್ರೀಉತ್ತರಾದಿಮಠಾಧೀಶರಿಂದ ‘ಧ್ಯಾನಪ್ರಮೋದ’ಪ್ರಶಸ್ತಿಗಳು ಇವುಗಳಲ್ಲಿ ಪ್ರಮುಖವಾದವು. ಇದರೊಂದಿಗೆ ತಿರುಚಾನೂರಿನ SMSO ಸಭಾದಿಂದ ‘ಪ್ರಧಾನ ಧರ್ಮಾಧಿಕಾರಿ’ ಗೌರವ, ವಿದ್ಯಾವರ್ಧಕ ಸಂಘದಿಂದ ‘ಪ್ರವಚನ ಸಿಂಹ’ ಗೌರವಗಳಿಗೂ ಭಾಜನರಾಗಿರುವ ಶ್ರೀಮಳಗಿ ಜಯತೀರ್ಥಾಚಾರ್ಯರು ಅನೇಕ ನಿಯತಕಾಲಿಕಗಳಲ್ಲಿ, ವೃತ್ತಪತ್ರಿಕೆಗಳಲ್ಲಿ ಶ್ರೀಮಧ್ವಸಿದ್ಧಾಂತವನ್ನು ಕುರಿತ ಲೇಖನಗಳನ್ನು ಬರೆಯುವುದರೊಂದಿಗೆ ಅನೇಕ ರಾಷ್ಟ್ರಮಟ್ಟದ ವಿಚಾರಸಂಕಿರಣಗಳಲ್ಲಿ ಪ್ರಬಂಧಗಳನ್ನೂ ಸಹಾ ಮಂಡಿಸಿದ್ದಾರೆ. ಸಂಸ್ಕೃತಸಾಹಿತ್ಯ ಕುರಿತ ಅನೇಕ ರಾಷ್ಟ್ರೀಯ ವಿಚಾರಸಂಕಿರಣಗಳ ಆಯೋಜನೆಯನ್ನೂ ಮಾಡಿರುವ ಶ್ರೀಮಳಗಿ ಜಯತೀರ್ಥಾಚಾರ್ಯರ ಪ್ರವಚನಗಳೆಂದರೆ ಕಂಚಿನ ಕಂಠದ, ಸ್ಪಷ್ಟವಾದ ವಿಚಾರಮಂಡನೆಯ ವಿದ್ವತ್ಸಮಾರಾಧನೆಯೇ ಸರಿ. ಶ್ರೀಮಾಧವ,ಮಧ್ವರ ಸೇವೆಯನ್ನು ಅಪೂರ್ವವಾಗಿ ಮಾಡಿದ ಮಹಾ ಚೇತನ ಅವರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share198Tweet123Send
Previous Post

ಮಂಗಳೂರು ರಿಕ್ಷಾ ಬ್ಲಾಸ್ಟ್’ಗೆ ತೀರ್ಥಹಳ್ಳಿ ಲಿಂಕ್! ಉಗ್ರ ಶಾರಿಕ್ ಮನೆಯಲ್ಲಿ ತಪಾಸಣೆ, ಕುಟುಂಬಸ್ಥರ ವಿಚಾರಣೆ

Next Post

ಅವೈಜ್ಞಾನಿಕ ಸಂವಿಧಾನ ಬಾಹಿರ ಯೋಜನೆಯಿಂದ ಗ್ರಾಮಸ್ಥರಿಗೆ ಬೇಸರ: ಹೋರಾಟದ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅವೈಜ್ಞಾನಿಕ ಸಂವಿಧಾನ ಬಾಹಿರ ಯೋಜನೆಯಿಂದ ಗ್ರಾಮಸ್ಥರಿಗೆ ಬೇಸರ: ಹೋರಾಟದ ಎಚ್ಚರಿಕೆ

ಅವೈಜ್ಞಾನಿಕ ಸಂವಿಧಾನ ಬಾಹಿರ ಯೋಜನೆಯಿಂದ ಗ್ರಾಮಸ್ಥರಿಗೆ ಬೇಸರ: ಹೋರಾಟದ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಖಾಲಿ ಹುದ್ದೆ ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ 

ಖಾಲಿ ಹುದ್ದೆ ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ 

April 10, 2026
ಪಿಯುಸಿ ರಿಸಲ್ಟ್ | ಆಳ್ವಾಸ್ ಐತಿಹಾಸಿಕ ಸಾಧನೆ | ಒಂದರಿಂದ ಹತ್ತರೊಳಗೆ 95 ವಿದ್ಯಾರ್ಥಿಗಳು

ಪಿಯುಸಿ ರಿಸಲ್ಟ್ | ಆಳ್ವಾಸ್ ಐತಿಹಾಸಿಕ ಸಾಧನೆ | ಒಂದರಿಂದ ಹತ್ತರೊಳಗೆ 95 ವಿದ್ಯಾರ್ಥಿಗಳು

April 10, 2026
ಪಿಯುಸಿ ಫಲಿತಾಂಶ | ಶಕ್ತಿ ಪಿಯು ಕಾಲೇಜಿನ ಮೌಲ್ಯ ಕರುಣಾಕರ ಶೆಟ್ಟಿ (ವಿಜ್ಞಾನ), ಶ್ರೀವಿಷ್ಣು (ವಾಣಿಜ್ಯ) ಕಾಲೇಜಿಗೆ ಪ್ರಥಮ

ಪಿಯುಸಿ ಫಲಿತಾಂಶ | ಶಕ್ತಿ ಪಿಯು ಕಾಲೇಜಿನ ಮೌಲ್ಯ ಕರುಣಾಕರ ಶೆಟ್ಟಿ (ವಿಜ್ಞಾನ), ಶ್ರೀವಿಷ್ಣು (ವಾಣಿಜ್ಯ) ಕಾಲೇಜಿಗೆ ಪ್ರಥಮ

April 10, 2026
ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ | ವಿವಿಧ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ | ವಿವಿಧ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

April 10, 2026
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್‌ಆರ್ ರಾಮಸ್ವಾಮಿ ನಿಧನ

ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್‌ಆರ್ ರಾಮಸ್ವಾಮಿ ನಿಧನ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL