ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಸುದೀಪ್ Actor Sudeep ಹೇಳಿದರು.
ಇಂದು ತಮ್ಮ ನಿವಾಸದಲ್ಲಿ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರೊಂದಿಗೆ ಗೋಪೂಜೆ ನೇರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ ಎಂದರು.
ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ Punyakoti Dattu Yojane ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, CM Basavaraja Bommai ಸಚಿವ ಪ್ರಭು ಚವ್ಹಾಣ್ Minister Prabhu Chouhan ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಸುದೀಪ್ ಮನವಿ ಮಾಡಿದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದ ನಂತರ 100 ಸರ್ಕಾರಿ ಗೋಶಾಲೆ ಸ್ಥಾಪಿಸಲಾಗುತ್ತಿದೆ. ರಾಷ್ಟ್ರದಲ್ಲಿಯೇ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ ಕೇಂದ್ರ, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮ ನಿರ್ಭರ ಗೋಶಾಲೆ ಸ್ಥಾಪನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಸಚಿವರು ತಿಳಿಸಿದರು.

ಗೋಶಾಲೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ, ಸಾರ್ವಜನಿಕರ ಸಹಕಾರದಿಂದ ಯಾವುದೇ ಅಡಚಣೆಯಿಲ್ಲದೇ ನಡೆಸುವುದು ಈ ಯೋಜನೆ ಉದ್ದೇಶ. ಗೋವು ದತ್ತು, ಗೋಶಾಲೆಗೆ ದೇಣಿಗೆ ಮತ್ತು ಜಾನುವಾರುಗಳಿಗೆ ಆಹಾರ ಯೋಜನೆಯಡಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಗೋವುಗಳ ಪಾಲನೆಗೆ ಅವಕಾಶ ಕಲ್ಪಿಸಲಾಗಿದೆ. ತಾವು ಸರ್ಕಾರದೊಂದಿಗೆ ಕೈಜೋಡಿಸಿ ಗೋಸಂಕುಲ ಸಂರಕ್ಷಣೆಯಲ್ಲಿ ಭಾಗವಹಿಸಬೇಕು ಎಂದು ಪ್ರಭು ಚವ್ಹಾಣ್ ಅವರು ಚಿತ್ರನಟ ಸುದೀಪ್ ಅವರಿಗೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಚಿತ್ರನಟ ಸುದೀಪ್ ಅವರಿಗೆ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರ ವಿತರಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಇಲಾಖೆ ಕಾರ್ಯದರ್ಶಿ ಡಾ.ಸಲ್ಮಾ ಕೆ.ಫಾಹೀಮ್, ಆಯುಕ್ತೆ ಎಸ್.ಅಶ್ವಥಿ, ಅಪರ ನಿರ್ದೇಶಕ ಡಾ.ಶ್ರೀನಿವಾಸ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post