ಕಲ್ಪ ಮೀಡಿಯಾ ಹೌಸ್ | ರಾಯಚೂರು |
ಜಿಲ್ಲೆಯಲ್ಲಿ ಮಕ್ಕಳ ಹಾಗೂ ಗರ್ಭಿಣೀಯರಲ್ಲಿ ಅಪೌಷ್ಠಿಕತೆ ನಿರ್ಮೂಲನೆಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದಿಗೆ ಆರೋಗ್ಯ ಇಲಾಖೆಯು ಸಹಕಾರದಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ವಿವಿಧ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಆರೋಗ್ಯದ ವಿಚಾರವಾಗಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹೆಚ್ಚಿನ ಕಾಳಜಿ ವಹಿಸಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆಯಿಂದ ನಡೆಸಲಾಗುವ ವಿವಿಧ ಜಾಗೃತಿ ಕಾರ್ಯಕ್ರಮಗಳು ಹಾಗೂ ಸರ್ಕಾರ ಯೋಜನೆಗಳನ್ನು ಅನುಷ್ಠಾನಗೊಳಿಸಿ ಸರ್ಕಾರದ ಸೌಲಭ್ಯಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ತಿಳಿಸಿದರು.
ಗ್ರಾಮೀಣ ಮಟ್ಟದಿಂದ ಜಿಲ್ಲಾ ಮಟ್ಟದವರೆಗಿನ ಎಲ್ಲಾ ಆರೋಗ್ಯ ಕೇಂದ್ರಗಳು ಹಾಗೂ ಆಸ್ಪತ್ರೆಗಳಲ್ಲಿ ಸರಿಯಾದ ಸಮಯದಲ್ಲಿ ಹಾಜರಿದ್ದು, ರೋಗಿಯ ಆರೈಕೆ ಜೊತೆಗೆ ಆಡಳಿತ ವಿಚಾರದಲ್ಲಿಯೂ ಹೆಚ್ಚಿನ ಒತ್ತು ನೀಡುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಎಲ್ಲಾ ಉಪ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳು ಕಾಯಕಲ್ಪ ಯೋಜನೆ ಅಡಿಯಲ್ಲಿ ಸೂಚಿಸಿದಂತಹ ಮಾನದಂಡಗಳ ಪ್ರಕಾರ ಅರ್ಹತೆ ಪಡೆದುಕೊಳ್ಳಬೇಕು ಎಂದರು.
Also read: ಮಾನಸಿಕ ಕಿರುಕುಳ ಹಿನ್ನೆಲೆ ಮಹಿಳೆ ಆತ್ಮಹತ್ಯೆ
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುರೇಂದ್ರಬಾಬು. ರಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಬಸವರಾಜ ಪಿರಾಪುರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಕೆಯ ಉಪನಿರ್ದೇಶಕ ಎಸ್. ಚೇತನ್, ಆರ್‌ಸಿಎಚ್ ಅಧಿಕಾರಿ ನಂದಿತಾ ಸೇರಿದಂತೆ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ತಾಲೂಕ ಆರೋಗ್ಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















