ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾತ್ರ ಖರೀದಿ ಕೇಂದ್ರವನ್ನ ತೆರೆದು ಸರ್ಕಾರದ ಬೆಂಬಲ ಬೆಲೆಗೆ 500ರೂ.ಗಳನ್ನ ಹೆಚ್ಚವರಿಯಾಗಿ ನೀಡುತ್ತಿದ್ದಾರೆ, ಇದನ್ನ ರಾಜ್ಯದ ಎಲ್ಲಾ ಭತ್ತ ಬೆಳೆಗಾರರಿಗೂ ಕೊಟ್ಟು ಖರೀದಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಒತ್ತಾಯಿಸಿದರು.
ಭತ್ತ ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸಿ ರೈತರಿಂದ ತಕ್ಷಣವೇ ಖರೀದಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಇದುವರೆಗೂ ಹೋಬಳಿ ಮತ್ತು ಹಳ್ಳಿಗಳಲ್ಲಿನ ಅಕ್ಕಿ ಮಿಲ್ ಗಳಲ್ಲಿ ಖರೀದಿ ಕೇಂದ್ರವನ್ನು ತೆರೆದು ರೈತರಿಂದ ಭತ್ತವನ್ನು ಖರೀದಿ ಮಾಡುತ್ತಿದ್ದರು. ಈಗ ಕೆ.ಎಸ್ ಎಫ್.ಸಿ ಮೂಲಕ ಖರೀದಿಗೆ ಆದೇಶ ನೀಡಿದೆ ಜಿಲ್ಲೆಯಲ್ಲಿ ಒಂದು ಅಥವಾ ಎರಡು ಕೇಂದ್ರಗಳನ್ನು ತೆರೆದರೆ ರೈತರಿಗೆ ತೊಂದರೆಯಾಗುತ್ತದೆ, ಆದ್ದರಿಂದ ಮೊದಲಿನಂತೆ ಮುಂದುವರಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
Also read: ಆರೋಗ್ಯ ಇಲಾಖೆ ಸಿಬ್ಬಂದಿಗಳು ಹೆಚ್ಚಿನ ಕಾಳಜಿಯಿಂದ ಕಾರ್ಯ ನಿರ್ವಹಿಸಿ: ಜಿಪಂ ಸಿಇಒ ಸೂಚನೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















