Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ಕನ್ನಡ ಭಾಷೆಯ ಉಳಿವಿಗಾಗಿ ದೊಡ್ಡಮಟ್ಟದ ಅಭಿಯಾನ ಅವಶ್ಯ: ಶಾಸಕ ಬಂಡೆಪ್ಪ ಖಾಶೆಂಪುರ್

November 28, 2022
in ಬೀದರ್
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಬೀದರ್ ಕನ್ನಡ ಶ್ರೇಷ್ಟವಾದ ಕನ್ನಡವಾಗಿದೆ. ಪಕ್ಕದಲ್ಲೇ ತೆಲಂಗಾಣ, ಮಹಾರಾಷ್ಟ್ರ್ರ ರಾಜ್ಯವಿದ್ದು, ತೆಲಗು, ಮರಾಠಿಗಳ ನಡುವೆ ಕೂಡ ಬೀದರ್ ನಲ್ಲಿರುವ ನಾವು ನಮ್ಮ ತನವನ್ನು ಬಿಟ್ಟುಕೊಡದೆ ನಮ್ಮ ಭಾಷೆಯನ್ನು ಉಳಿಸಿ, ಬೆಳಸಿಕೊಂಡು ಸಾಗುತ್ತಿದ್ದೇವೆಂದು ಶಾಸಕ  ಬಂಡೆಪ್ಪ ಖಾಶೆಂಪುರ್ MLA Bandeppa Khashempur ಹೇಳಿದರು.

ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನ, ಗಂಗನಪಳ್ಳಿ ಪರಿವಾರ, ಸಿಕಿಂದ್ರಾಪೂರ ಪರಿವಾರ ಬೀದರ್ ಗಳ ಸಂಯುಕ್ತಾಶ್ರಯದಲ್ಲಿ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೆವರು ರಂಗಮಂದಿರದಲ್ಲಿ ಭಾನುವಾರ ನಡೆದ ಶಿಕ್ಷಕ – ಸಾಹಿತಿ ಡಾ. ಸಂಜುಕುಮಾರ ಅತಿವಾಳೆ ಸಂಪಾದಿಸಿರುವ ಭಾವಗಂಗೆ ಕೃತಿ ಲೋಕಾರ್ಪಣೆ ಹಾಗೂ ಸಾಹಿತಿ – ಕಲಾವಿದರ ಸಂಗಮ ಸಾಂಸ್ಕೃತಿಕ ಮತ್ತು ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೀದರ್ ಭಾಷೆಯೇ ದೊಡ್ಡ ಸಾಹಿತ್ಯವಾಗಿದೆ. ಇಲ್ಲಿನ ಕನ್ನಡ ವಿಶೇಷ ಕನ್ನಡವಾಗಿದೆ ಎಂದರು.
ಬೀದರ್ ಭಾಗದ ಕನ್ನಡ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಅಭಿಯಾನ ಶುರು ಮಾಡಬೇಕಾಗಿದೆ. ನಮ್ಮ ಕನ್ನಡ ಭಾಷೆಯ ಉಳಿವಿಗಾಗಿ ದೊಡ್ಡಮಟ್ಟದ ಅಭಿಯಾನ ಮಾಡಬೇಕಾಗಿದೆ. ನಾವು ಬೆಂಗಳೂರಿನಂತ ಮಹಾನಗರಗಳ ಕಡೆಗೆ ಹೋಗುತ್ತಿದ್ದೇವೆ. ಆ ಮೂಲಕ ಬೀದರ್ ಭಾಷೆಯನ್ನು ಮರೆಯುತ್ತಿದ್ದೇವೆ. ಬೀದರ್ ಕನ್ನಡ ದೊಡ್ಡ ಸಾಹಿತ್ಯವಾಗಿದೆ. ಅದನ್ನು ಉಳಿಸಿಕೊಂಡು ಸಾಗಬೇಕಾಗಿದೆ. ಕನ್ನಡ ಸಾಹಿತ್ಯ, ಕನ್ನಡ ಭಾಷೆ ಉಳಿಸಿದ ಶ್ರೇಯಸ್ಸು ಯಾರಿಗಾದರೂ ಸಿಗುತ್ತದೆ ಎಂದರೇ ಅದು ಬೀದರ್ ನವರಿಗೆ ಸಲ್ಲುತ್ತದೆ. ಸಾಹಿತ್ಯದ ಜೊತೆ ಜೊತೆಗೆ ಬೀದರ್ ಭಾಷೆ ಉಳಿಸುವುದು ಸಹ ನಮ್ಮೆಲ್ಲರ ದೊಡ್ಡಮಟ್ಟದ ಕರ್ತವ್ಯವಾಗಿದೆ. ಭಾಷೆ ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೆಲಸ ಮಾಡೋಣ. ಸಾಹಿತಿಗಳು ಬೀದರ್ ಭಾಷೆ ಉಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆರವರು ಮಾತನಾಡಿ, ಸಾಹಿತಿ ಗಂಗನಪಳ್ಳಿರವರು ಸಾಹಿತ್ಯಕ್ಕಾಗಿ ಬಹಳಷ್ಟು ಶ್ರಮಿಸಿದ್ದಾರೆ. ಅವರು ಕನ್ನಡ ಸಾಹಿತ್ಯಕ್ಕೆ ದೊಡ್ಡಮಟ್ಟದ ಕೊಡುಗೆ ನೀಡಿದ್ದಾರೆ. ಅವರು ಐವತ್ತು ವರ್ಷಗಳಿಂದ ಸಾಹಿತ್ಯ ಸೇವೆಯಲ್ಲಿ ತೊಡಗಿದ್ದಾರೆ. ಅವರ ಸಾಹಿತ್ಯದ ಸೇವೆ ಇವತ್ತು ಪುಸ್ತಕ ರೂಪದಲ್ಲಿ ಹೊರಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಒಬ್ಬ ಹಿರಿಯ ಜೀವಿಯ ಸಾಹಿತ್ಯ ಸೇವೆಯನ್ನು ಗುರುತಿಸುವ ನಿಟ್ಟಿನಲ್ಲಿ ಎಂಬತ್ತೇರಡು ಜನ ಸಾಹಿತಿಗಳು ಮುನ್ನುಡಿ, ಇನ್ನೂಡಿ ಬರೆದಿರುವ ಈ ಪುಸ್ತಕವನ್ನು ಎಲ್ಲರೂ ಖರೀದಿಸಿ ಓದಬೇಕು. ಆ ಮೂಲಕ ಸಾಹಿತಿಗಳಿಗೆ ಶಕ್ತಿ ತುಂಬಬೇಕೆಂದು ವಿಧಾನ ಪರಿಷತ್ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆರವರು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಗಂದಗೆ, ಭಾವಗಂಗೆ ಕೃತಿಯ ಸಂಪಾದಕ ಸಂಜೀವಕುಮಾರ್ ಅತಿವಾಳೆರವರು ಸೇರಿದಂತೆ ಅನೇಕರು ಮಾತನಾಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಹೊಸಮನಿ, ಹಿರಿಯ ಸಾಹಿತಿ ಎಂ.ಜಿ ಗಂಗನಪಳ್ಳಿ, ಡಾ. ರಾಜಶೇಖರ ಜಮದಂಡಿ, ಪ್ರೊ. ಸಿದ್ರಾಮಪ್ಪ ಮಾಸಿಮಾಡೆ, ಗುರಮ್ಮ ಸಿದ್ದಾರೆಡ್ಡಿ, ಪುಣ್ಯವತಿ ವಿಸಾಜಿ, ಅಮೃತರಾವ್ ಚಿಮಕೋಡೆ, ಸುರೇಶ ಚನ್ನಶೆಟ್ಟಿ, ಕವಿತಾ ಸ್ವಾಮಿ, ಡಾ. ಶಾಮರಾವ್ ನೆಲವಾಡೆ, ರೇಣುಕಾ ಮಳ್ಳಿ, ಲಕ್ಷ್ಮಣ ಮೇತ್ರೆ ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Bandeppa KhashempurNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Previous Post

ಸಿರಿ ಲಕುಮಿಗೆ ಇಂದು ರಂಗ ಪ್ರವೇಶ, ಅರಳುವ ಪ್ರತಿಭೆಗೆ ದೊರೆತ ಸಮರ್ಥ ವೇದಿಕೆ

Next Post

ನಾಗರೀಕ ಬದುಕನ್ನು ಎತ್ತಿ ಹಿಡಿಯುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ: ಡಾ. ಪ್ರಸನ್ನ ಕುಮಾರ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಗರೀಕ ಬದುಕನ್ನು ಎತ್ತಿ ಹಿಡಿಯುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ: ಡಾ. ಪ್ರಸನ್ನ ಕುಮಾರ್ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!