ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನೈಸ್ ರೋಡ್ ಮಾಗಡಿ ಜಂಕ್ಷನ್ ಬಳಿ ನಡೆದಿದೆ.
ರಾಮನಗರ ಜಿಲ್ಲೆ ಗೊಲ್ಲರಹಟ್ಟಿಯ ಇಂದಿರಾ ಕಾಲೋನಿ ನಿವಾಸಿಗಳಾದ ಮಂಜುನಾಥ್ (25), ಶಿವರಾಜ್ (29) ಎಂದು ಗುರುತಿಸಲಾಗಿದೆ.
ಸವಾರರು ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಅಪಘಾತ ಸಂಭವಿಸಿದೆ. ಎನ್ನಲಾಗಿದ್ದು, ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















