ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ನಿವೃತ್ತ ಕೆಎಎಸ್ ಅಧಿಕಾರಿ ಎಚ್.ಟಿ. ಬಳಿಗಾರ್ ಅವರು ಇಂದು ನಿಕಟ ಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, B S Yadiyurapa ಸಂಸದ ಬಿ. ವೈ ರಾಘವೇಂದ್ರ MP Raghavendra ಹಾಗೂ ಬಿಜೆಪಿಯ ಮುಖಂಡರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಶಿಕಾರಿಪುರ ಬಿಜೆಪಿ ಕಛೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.
ಕಾರ್ಯಕ್ರಮದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗುರುಮೂರ್ತಿ , ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ, ಪಕ್ಷದ ತಾಲೂಕು ಅಧ್ಯಕ್ಷರಾದ ವೀರೇಂದ್ರ ಪಾಟೀಲ್, ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.









Discussion about this post