ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಹಂಪನ ಕಟ್ಟೆ ವಿಶ್ವವಿದ್ಯಾಲಯ ಸರ್ಕಾರಿ ಪದವಿ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.
ಕೆಲವು ದಿನಗಳ ಹಿಂದೆ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿದ್ದು, ಸಭೆಯಲ್ಲಿ ಹಿಹಾಬ್ ಧರಿಸದಂತೆ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಕೆಲವು ವಿದ್ಯಾರ್ಥಿನಿಯರು ಕಾಲೇಜಿಗೆ ಇಂದು ಹಿಜಾಬ್ ಧರಿಸಿ ಬಂದಿದ್ದು, ಉಳಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಎಬಿವಿಪಿ ವಿದ್ಯಾರ್ಥಿಗಳು ಹಿಜಾಬ್ ವಿರೋಧಿಸಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post