ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕೊರೋನಾ ಹಾಗೂ ಲಾಕ್ ಡೌನ್ ಸಂಕಷ್ಟದಿಂದ ಬಳಲುತ್ತಿರುವ ಮಂದಿಗೆ ಹಲವಾರು ಸಂಘ ಸಂಸ್ಥೆಗಳು ಸಹಾಯ ಮಾಡುತ್ತಿರುವಂತೆಯೇ ನಗರದ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದಲೂ ಸಹ ಅನ್ನದಾನ ಮಾಡಲಾಗುತ್ತಿದೆ.
ಕರ್ನಾಟಕ ರಾಜ್ಯ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಫಾಸ್ಟರ್ ದೇವನೇಸನ್ ಸ್ವಾಮ್ಯುವೆಲ್ ರವರ ಮಾರ್ಗದರ್ಶನದಲ್ಲಿ ಐದನೇ ದಿನವಾದ ಇಂದು ಸಹ ಹಸಿದವರಿಗೆ ಅನ್ನ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಒಕ್ಕೂಟದ ಸದಸ್ಯರೆಲ್ಲರೂ ಒಗ್ಗೂಡಿ ತಮ್ಮ ಸ್ವಂತ ಹಣದಲ್ಲಿ ಈ ಕಾರ್ಯ ಕೈಗೊಂಡಿದ್ದು, ಪ್ರತಿದಿನ 100 ಮಂದಿಗೆ ಸಿದ್ದಪಡಿಸಿದ ಆಹಾರ ವಿತರಿಸುವ ಮೂಲಕ ಮಾನವೀಯತೆ ಮರೆದಿದ್ದಾರೆ.
ಒಕ್ಕೂಟದ ಮುಖಂಡರಾದ ಸೆಲ್ವರಾಜ್, ಫ್ರಾನ್ಸಿಸ್, ವಿಲ್ಸನ್ ಬಾಬು, ಭಾಸ್ಕರ್ ಮತ್ತು ಮತ್ತಿತರರು ಈ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post