ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ-ಶಿವಮೊಗ್ಗ ರಾಮ |
ಉಡುಪ ಪ್ರತಿಷ್ಠಾನದ ದಶಮಾನೋತ್ಸವ ಅಂಗವಾಗಿ ರಾಜಧಾನಿ ಬೆಂಗಳೂರಿನ ಸಂಗೀತ ಕಲಾ ರಸಿಕರಿಗೆ‘ ಉಡುಪ ಸಂಗೀತೋತ್ಸವ’ ಸಂಭ್ರಮ ಮುದ ನೀಡಲು ಅಣಿಯಾಗಿದೆ.
ಉದ್ಯಾನ ನಗರಿಯ ಜಯನಗರದ ಜೆಎಸ್‌ಎಸ್ ಸಭಾಂಗಣದಲ್ಲಿ ಆಗಸ್ಟ್ 24 ರಂದು ದಿನಪೂರ್ಣ ಸಂಗೀತ – ನೃತ್ಯ ಸಮಾರಾಧನೆ ನೆರವೇರಲಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಲಾವಿದರು ವಾದನ-ಗಾಯನ ಮತ್ತು ನರ್ತನದ ಮೂಲಕ ಸಂಗೀತ ರಸಿಕರ ಮನ ತಣಿಸಲಿದ್ದಾರೆ. ಪ್ರವೇಶ ಉಚಿತವಾಗಿದೆ. ಅಂದು ಬೆಳಗ್ಗೆ 10ಕ್ಕೆ ತಾಳವಾದ್ಯ- ಕಛೇರಿ ಆಯೋಜನೆಗೊಂಡಿದೆ.
ಹೆಸರಾಂತ ವಿದ್ವಾಂಸರಾದ ಅದಮ್ಯ ರಮಾನಂದ, ಅನಿರುದ್ಧ ಎಸ್. ಭಟ್, ಸೋಮಶೇಖರ ಜೋಯಿಸ್ ಅವರ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ 22 ಕಲಾವಿದರು ತಾಳವಾದ್ಯದ ಹೊಸ ರಂಗುಗಳನ್ನು ಕಲಾ ರಸಿಕರಿಗೆ ಸಮರ್ಪಿಸಲಿದ್ದಾರೆ.
ಮೃದಂಗ, ಖಂಜಿರ, ಘಟ, ಕೊನ್ನಕೋಲ್ ಮತ್ತು ಮೊರ್ಸಿಂಗ್ ವಾದ್ಯಗಳು ಅನುರಣಿಸಲಿವೆ. ಕಣ್ಮನಗಳನ್ನು ತಣಿಸುವ ಈ ಕಾರ್ಯಕ್ರಮವನ್ನು ನೋಡುವುದೇ ಒಂದು ಸೊಗಸಾಗಲಿದೆ.

ಭರತನಾಟ್ಯ ಪ್ರಸ್ತುತಿ
ಭಾನುವಾರ ಸಂಜೆ 5 ಗಂಟೆಗೆ ಹಿರಿಯ ಭರತನಾಟ್ಯ ವಿದ್ವಾಂಸ ವಿದ್ವಾನ್ ಸತ್ಯನಾರಾಯಣ ರಾಜು, ವಿದುಷಿ ಮೀರಾ ಶ್ರೀ ನಾರಾಯಣನ್ ಹಾಗೂ ಉದಯೋನ್ಮುಖ ಕಲಾವಿದೆ ಯುಕ್ತಿ ಉಡುಪ ಅವರಿಂದ ವಿಶೇಷ ಭರತನಾಟ್ಯ ಪ್ರಸ್ತುತಗೊಳ್ಳಲಿದೆ. ತಂಜಾವೂರು ಸಹೋದರರ ರಚನೆಯ ಅಷ್ಟರಾಗ ಮಾಲಿಕಾ ವರ್ಣವನ್ನು ಈ ಕಲಾವಿದರು ಪಡಮೂಡಿಸಲಿದ್ದಾರೆ.
ಖ್ಯಾತ ವಿದುಷಿ ನರ್ಮದಾ ನೃತ್ಯ ಸಂಯೋಜನೆಯನ್ನು ಒಂದು ಗಂಟೆಗಳ ಅವಧಿಯಲ್ಲಿ ರಂಗಕ್ಕೆ ಅಳವಡಿಸಿರುವುದು ಗಮನಾರ್ಹವಾಗಿದೆ.
ನಾಡಿನ ಪ್ರತಿಷ್ಠಿತ ಸಂಸ್ಥೆ
ವಿಶ್ವ ಖ್ಯಾತಿಯ ಘಟಂ ವಿದ್ವಾಂಸ ಗಿರಿಧರ ಉಡುಪ ರವರಿಂದ 2015ರಲ್ಲಿ ಸ್ಥಾಪನೆಗೊಂಡ ಉಡುಪ ಪ್ರತಿಷ್ಠಾನವು ಶಾಸ್ತ್ರೀಯ ಸಂಗೀತ, ಪ್ರದರ್ಶನ ಕಲೆ ಮತ್ತು ಸಂಸ್ಕೃತಿಗಳನ್ನು ಉತ್ತೇಜಿಸುವ ಮೂಲಕ ನಾಡಿನ ಪ್ರತಿಷ್ಠಿತ ಸಂಸ್ಥೆಯಾಗಿದೆ.

ಇದೀಗ ಆಗಸ್ಟ್ 24ರ ಭಾನುವಾರದಂದು ಸಂಗೀತ ನೃತ್ಯ ಉತ್ಸವದ ಮೂಲಕ ಕಲರಸಿಕರಿಗೆ ಮುದ ನೀಡುವ ಸೇವೆಯನ್ನು ಮಾಡಲಾಗುತ್ತಿದೆ ಎಂದು ಫೌಂಡೇಷನ್ ಟ್ರಸ್ಟಿ ಸಂಧ್ಯಾ ಉಡುಪ ವಿವರಿಸಿದ್ದಾರೆ.
ವಿದ್ವಾನ್ ಗಿರಿಧರ ಉಡುಪರ ಮಾದರಿ ಕಾರ್ಯ:
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post