ಕಲ್ಪ ಮೀಡಿಯಾ ಹೌಸ್ | ಶ್ರೀಹರಿಕೋಟಾ |
ಭಾರತದ ಇಸ್ರೋ #ISRO ಸಂಸ್ಥೆಯ ಮಹತ್ವಾಕಾಂಕ್ಷಿ ಚಂದ್ರಯಾನ-3 #Chandrayana3 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಮಟ್ಟಿಗೆ ಇಂದು ಐತಿಹಾಸಿಕ ದಿನವಾಗಿದೆ. ಮಾತ್ರವಲ್ಲ ಇಡಿಯ ವಿಶ್ವವೇ ನಮ್ಮ ದೇಶದೆಡೆಗೆ ಕುತೂಹಲದಿಂದ ನೋಡುತ್ತಿದೆ.
ಭಾರತೀಯ ಕಾಲಮಾನದ ಪ್ರಕಾರ ಇಂದು ಮಧ್ಯಾಹ್ನ 2.35ಕ್ಕೆ ಆಂಧ್ರಪ್ರದೇಶದ #AndraPradesh ಶ್ರೀಹರಿಕೋಟಾದಲ್ಲಿರುವ #Sriharikota ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದ್ದು, ಇಂದಿನಿಂದ ಆರು ವಾರಗಳ ಕಾಲ ಇಸ್ರೋದ ಮಹತ್ವದ ಕಾರ್ಯಾಚರಣೆ ಆರಂಭವಾಗಲಿದೆ.
2019ರಲ್ಲಿ ಚಂದ್ರಯಾನ-2ನ್ನು #Chandrayana2 ಸುಲಲಿತವಾಗಿ ಚಂದ್ರನ ಮೇಲೆ ಇಳಿಸಲು ವಿಫಲವಾದರೂ ಕುಗ್ಗದ ಇಸ್ರೋದ ವಿಜ್ಞಾನಿಗಳು, ನಿರಂತರ ಶ್ರಮ ವಹಿಸಿ ಚಂದ್ರಯಾನ-3ನ್ನು ಸಿದ್ದಪಡಿಸಿದ್ದಾರೆ. ಇದರ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಇತಿಹಾಸದಲ್ಲಿ ಇಂದು ಮಹತ್ವದ ದಿನವಾಗಿದೆ.
Chandrayaan-3 mission:
The ‘Launch Rehearsal’ simulating the entire launch preparation and process lasting 24 hours has been concluded.Mission brochure: https://t.co/cCnH05sPcW pic.twitter.com/oqV1TYux8V
— ISRO (@isro) July 11, 2023
ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ. ಚಂದ್ರಯಾನ-3 ಉಪಗ್ರಹವನ್ನು ಎಲ್ ವಿಎಂ3 ರಾಕೆಟ್ ಇಂದು ಮಧ್ಯಾಹ್ನ 2.35ಕ್ಕೆ ಹೊತ್ತೊಯ್ಯಲಿದೆ. ಅದಕ್ಕೆ ಅಂತಿಮ ಕ್ಷಣದ ಪೂರ್ವಸಿದ್ಧತೆಗಳು ಸರಾಗವಾಗಿ ಸಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.
ಯಾವಾಗ ಲ್ಯಾಂಡ್ ಆಗಲಿದೆ?
ಇಂದು ಉಡಾವಣೆಯಾಗಲಿರುವ ಉಪಗ್ರಹ ಇಳಿಯಲು ಗೊತ್ತುಪಡಿಸಿದ ಲ್ಯಾಂಡಿಂಗ್ ಕೇಂದ್ರ ಚಂದ್ರನ ದಕ್ಷಿಣ ಧ್ರುವವಾಗಿದೆ, ಚಂದ್ರನ #Moon ಮೇಲ್ಮೈ ಮೇಲೆ ಆಗಸ್ಟ್ 23 ಅಥವಾ 24 ರ ಸುಮಾರಿಗೆ ಲ್ಯಾಂಡಿಂಗ್ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಇದು 14 ಭೂಮಿಯ ದಿನಗಳಿಗೆ ಸಮನಾಗಿರುತ್ತದೆ, ಚಂದ್ರಯಾನ-3 ಚಂದ್ರನ ಪರಿಶೋಧನೆಗೆ ಸಿದ್ಧವಾಗಿದೆ.
ಉಡಾವಣೆಯ ಲೈವ್ ವೀಕ್ಷಿಸಿ
ಇಂದು ಮಧ್ಯಾಹ್ನ ಉಪಗ್ರಹ ಉಡಾವಣೆಯ ಗಳಿಗೆಗಳನ್ನು ದೇಶದ ಜನತೆ ನೇರ ವೀಕ್ಷಿಸಲು ಇಸ್ರೋ ಅವಕಾಶ ಮಾಡಿಕೊಟ್ಟಿದೆ. ಇಸ್ರೋದ ಅಧಿಕೃತ ವೆಬ್ ಸೈಟ್ ಹಾಗೂ ಯೂಟ್ಯೂಬ್ ಚಾನಲ್’ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದ್ದು, ಆಸಕ್ತರು ವೀಕ್ಷಿಸಬಹುದು ಎಂದು ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post