ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರೀ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ #Shivamogga ಜಿಲ್ಲೆಯಾದ್ಯಂತ ಜುಲೈ 19ರ ಶುಕ್ರವಾರವೂ ಸಹ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ ನಿರಂತರವಾಗಿ ಭಾರೀ ಮಳೆ #HeavyRain ಸುರಿಯುತ್ತಿರುವ ಬೆನ್ನಲ್ಲೇ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದಾರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Also read: ಶಿಕಾರಿಪುರ | ಮೈದುಂಬಿಕೊಂಡ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಮರ್ಪಣೆ
Discussion about this post