ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಶಿವಮೊಗ್ಗದಲ್ಲಿ ನೂತನವಾಗಿ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.
ಅವರು ಇಂದು ದೆಹಲಿಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿ ಏಕಲವ್ಯ ಮಾದರಿ ವಸತಿ ಶಾಲೆ ಆರಂಭಿಸಲು ಅಗತ್ಯ ಅನುದಾನವನ್ನು ಮಂಜೂರು ಮಾಡುವಂತೆ ಮನವಿ ಮಾಡಿದ್ದುದರ ಫವಾಗಿ ಶಾಲಾ ಸಂಕೀರ್ಣ ನಿರ್ಮಾಣಕ್ಕೆ 20.00ಕೋಟಿ ರೂ.ಗಳ ಅನುದಾನ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರಲ್ಲದೇ ಪ್ರತಿ ವಿದ್ಯಾರ್ಥಿಗೆ ವರ್ಷಕ್ಕೆ ರೂ.1.09.000/-ಗಳ ವೆಚ್ಚ ಭರಿಸುವುದಾಗಿ
ಭರವಸೆ ನೀಡಿದ್ದಾರೆ ಎಂದವರು ತಿಳಿಸಿದ್ದಾರೆ.
ನೂತನವಾಗಿ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಆರಂಭಿಸಲು ಸಕಾರಾತ್ಮಕವಾಗಿ ಸ್ಪಂದಿಸಿ, ಅಗತ್ಯ ಅನುದಾನ ಮಂಜೂರು ಮಾಡುವಲ್ಲಿ ಸಹಕರಿಸಿದ ಕೇಂದ್ರ ಸಚಿವ ಅರ್ಜುನ ಮುಂಡಾ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post