ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶದ ಗಮನ ಸೆಳೆದ ಸಿಗಂಧೂರು ಸೇತುವೆ ಲೋಕಾರ್ಪಣೆ ಬೆನ್ನಲ್ಲೇ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದ ಬಿ. ವೈ. ರಾಘವೇಂದ್ರ ಅವರು ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನಾಲ್ಕು ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

- 575 ಕೋಟಿ ರೂ. ವೆಚ್ಚದ ಶಿವಮೊಗ್ಗ ವಿ ಮಂಗಳೂರು ನಡುವಿನ ಚತುಷ್ಪಥ ಹೆಸರಿಗೆ ಡಿಪಿಆರ್ ಸಿದ್ಧಪಡಿಸಲು ಸೂಚನೆ. ಶೀಘ್ರದಲ್ಲೇ ಕಾಮಗಾರಿ ಆರಂಭ.
- ಅಂದಾಜು 653 ಕೋಟಿ ರೂಪಾಯಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 206 ರ ಶಿವಮೊಗ್ಗದಿಂದ ಆನಂದಪುರಂವರೆಗೆ ಚತುಷ್ಪಥ ಹೆದ್ದಾರಿ ನಿರ್ಮಾಣ.
- ನೆಲ್ಲಿಸರ ಕ್ಯಾಂಪ್, ನಿಂದ ತೀರ್ಥಹಳ್ಳಿವರೆಗೆ ಚತುಷ್ಪಥ ಹೆದ್ದಾರಿ ನಿರ್ಮಾಣ.
- ಕೊಡಚಾದ್ರಿ ರೋಪ್ ವೇಗೆ ಶೀಘ್ರ ಒಪ್ಪಿಗೆ, ಕಾಮಗಾರಿ ಆರಂಭ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜನಸಾಮಾನ್ಯರ ಹಿತ ದೃಷ್ಟಿಯಿಂದ ತುರ್ತಾಗಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಅನುದಾನ ಒದಗಿಸಿ ಆಡಳಿತಾತ್ಮಕ ಅನುಮೋದನೆ ಆಗಿದೆ. ಈಗಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಗತಿಯಲ್ಲಿರುವ ಅನೇಕ ಯೋಜನೆಗಳಿಗೆ ಯಾವುದೇ ಅಡೆತಡೆಗಳಿಲ್ಲದೆ ನಿರಂತರವಾಗಿ ಕಾಮಗಾರಿಗಳು ಸಾಗಲು ಸಹಕಾರಕ್ಕೆ ಸಿದ್ಧ ಎಂದಿದ್ದಾರೆ.
ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ನಿರಂತರವಾಗಿ ಸಾಗಲು ಎಲ್ಲಾ ರೀತಿಯಿಂದಲೂ ಅನುಕೂಲ ನೀಡುತ್ತಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಭೂ ಸಾರಿಗೆ ಮಂತ್ರಾಲಯ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಅನಂತ ಅನಂತ ಧನ್ಯವಾದಗಳು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post