ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸಂಸತ್ ಚಳಿಗಾಲದ ಅಧಿವೇಶನದ ಆರಂಭದಲ್ಲೇ ಭಾರೀ ವಿವಾದ ಸೃಷ್ಠಿಯಾಗಿದ್ದು, ರಾಜ್ಯಸಭೆಯಲ್ಲಿ ಕಾಂಗ್ರೆಸ್ #Rajyasabha ಸಂಸದ ಅಭಿಷೇಕ್ ಮನು ಸಿಂಘ್ವಿ ಆಸನದ ಕೆಳಗೆ ಕಂತೆ ಕಂತೆ ನೋಟು ಪತ್ತೆಯಾಗಿದೆ.
ಕಾಂಗ್ರೆಸ್ #Congress ಸಂಸದರಾಗಿರುವ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದ ಕೆಳಗೆ ಕಂತೆ ಕಂತೆ ನೋಟು ಪತ್ತೆಯಾಗಿದ್ದು, ಈ ಕುರಿತಂತೆ ಸಭಾಪತಿ ಜಗದೀಪ್ ಧನಕರ್ ಅವರು ತನಿಖೆಗೆ ಆದೇಶಿಸಿದ್ದಾರೆ.
Also read: ಈಶ್ವರಪ್ಪರಿಗೆ ಮತ್ತೊಂದು ಸಂಕಷ್ಟ | ಕೋಟೆ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲು

ಈ ಕುರಿತಂತೆ ಮಾತನಾಡಿರುವ ಸಭಾಪತಿ ಜಗದೀಶ್ ಧನಕರ್ ಅವರು, ಘಟನೆ ಕುರಿತಂತೆ ಸದನಕ್ಕೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ನೋಟುಗಳು ನಕಲಿಯೋ ಅಥವಾ ಅಸಲಿಯೋ ಎಂಬುದು ತಿಳಿದು ಬಂದಿಲ್ಲ. ಸದನದ ಶಿಷ್ಟಾಚಾರದಂತೆ ತನಿಖೆಗೆ ಆದೇಶಿಸಲಾಗಿದೆ ಎಂದಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಂಘ್ವಿ, ಆ ಹಣ ನನ್ನದಲ್ಲ. ಬೇರೆ ಯಾರೋ ತಂದು ನನ್ನ ಆಸನದ ಕೆಳಗೆ ಇರಿಸಿರಬಹುದು. ಈ ಕುರಿತು ಸಮಗ್ರ ತನಿಖೆ ನಡೆಯಬೇಕು. ಆಗ ಸತ್ಯ ಹೊರಬರುತ್ತದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






Discussion about this post